ಸ್ಮಶಾನವಿಲ್ಲದೆ ದೊಡ್ಡಬಳ್ಳಾಪುರದ ಗ್ರಾಮಸ್ಥರ ಪರದಾಟ

| Published : Jul 06 2024, 12:48 AM IST

ಸ್ಮಶಾನವಿಲ್ಲದೆ ದೊಡ್ಡಬಳ್ಳಾಪುರದ ಗ್ರಾಮಸ್ಥರ ಪರದಾಟ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸ್ಮಶಾನ ಭೂಮಿ ಇಲ್ಲದೆ ಪರದಾಡುತ್ತಿದ್ದ ಗ್ರಾಮಸ್ಥರನ್ನು ಅಧಿಕಾರಿಗಳು ಭೇಟಿ ಮಾಡಿ ಮನವೊಲಿಸಲು ಯತ್ನಿಸಿದರು.

ಅಧಿಕಾರಿಗಳಿಂದ ಪ್ರತಿಭಟನೆಗೆ ಸಜ್ಜಾಗಿದ್ದ ಗ್ರಾಮಸ್ಥರ ಮನವೊಲಿಕೆ ಯತ್ನ

ದೊಡ್ಡಬಳ್ಳಾಪುರ: ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸ್ಮಶಾನ ಭೂಮಿ ಇಲ್ಲದೆ ಪರದಾಡುತ್ತಿದ್ದ ಗ್ರಾಮಸ್ಥರನ್ನು ಅಧಿಕಾರಿಗಳು ಭೇಟಿ ಮಾಡಿ ಮನವೊಲಿಸಲು ಯತ್ನಿಸಿದರು.

mortuary doddaballapur, ಸ್ಮ

ಗ್ರಾಮದಲ್ಲಿ ಕಳೆದ ಐದು ತಲೆಮಾರುಗಳಿಂದ ಮೃತಪಟ್ಟವರನ್ನು ನಿರ್ದಿಷ್ಟ ಜಾಗವೊಂದರಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿತ್ತು. ಆದರೆ, ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರು ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿಂದೆ ಸ್ಮಶಾನ ಕೆಡವಿದಾಗ ಸ್ಥಳಕ್ಕೆ ಬಂದಿದ್ದ ಅಧಿಕಾರಿಗಳಿಗೆ ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ, ಈ ವರೆಗೆ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಿರಲಿಲ್ಲ ಎನ್ನಲಾಗಿದೆ.

ಶುಕ್ರವಾರ ಗ್ರಾಮದ ದೇವರಾಜ್ (40) ಎಂಬುವರು ಮೃತಪಟ್ಟಿದ್ದು, ಅಂತ್ಯಕ್ರಿಯೆ ನಡೆಸಲು ಸ್ಥಳವಿಲ್ಲದೆ ಶವವನ್ನು ತಾಲೂಕು ಕಚೇರಿ ಮುಂದೆ ಇಟ್ಟು ಪ್ರತಿಭಟನೆ ನಡೆಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದರು. ಶವ ಕೊಂಡೊಯ್ಯಲು ಆ್ಯಂಬುಲೆನ್ಸ್ ಕೂಡ ಬಂದಿತ್ತು. ವಿಷಯ ತಿಳಿದ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಡಿವೈಎಸ್ಪಿ ಪಿ.ರವಿ. ತಹಸೀಲ್ದಾ‌ರ್ ವಿಭಾ ವಿದ್ಯಾ ರಾಠೋಡ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ಹಾಗೂ ಪೊಲೀಸ್ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಮಾತುಕತೆಗೆ ಮುಂದಾಗಿದ್ದಾರೆ.

ಈ ವೇಳೆ ಗ್ರಾಮಸ್ಥರು ಹಾಗೂ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ಗ್ರಾಮಸ್ಥರು, ನಮಗೆ ನಮ್ಮ ಪೂರ್ವಿಕರನ್ನು ಅಂತ್ಯಸಂಸ್ಕಾರ ಮಾಡಿದ ಜಾಗವನ್ನೇ ನೀಡಬೇಕು. ಅಲ್ಲಿ ನಮ್ಮ ಇತಿಹಾಸ ಮತ್ತು ಸಂಸ್ಕೃತಿ ಇದೆ ಎಂದು ಗ್ರಾಮಸ್ಥರು ಆಗ್ರಹಿಸಿದರು. ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಸಲು ಮುಂದಾದರು.