ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಲು ನಾಗರಘಟ್ಟ ಗ್ರಾಮಸ್ಥರ ಒತ್ತಾಯ

| Published : Mar 15 2024, 01:16 AM IST

ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಲು ನಾಗರಘಟ್ಟ ಗ್ರಾಮಸ್ಥರ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಾಗರಘಟ್ಟ ಗ್ರಾಪಂ ಕೇಂದ್ರವಾಗಿದ್ದು, ಇಲ್ಲಿ ಲಕ್ಷಾಂತರ ರು. ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಆರೇಳು ತಿಂಗಳುಗಳೇ ಕಳೆದಿದೆ. ಈ ನೀರಿನ ಘಟಕ ನಾಗರಘಟ್ಟ ಸೇರಿದಂತೆ ಎನ್. ಮೇಲನಹಳ್ಳಿ, ಗೋಪೇಗೌಡನಪಾಳ್ಯ ಮತ್ತಿತರ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಆಸರೆಯಾಗಿತ್ತು. ಆದರೆ ಈಗ ಶುದ್ಧ ನೀರಿಲ್ಲದೆ ಪರದಾಡುವಂತಾಗಿದೆ. ಗ್ರಾಪಂ ಗಮನಕ್ಕೆ ತಂದರೂ ಪ್ರಯೋಜನವಿಲ್ಲದಂತಾಗಿದೆ.

ಅಧಿಕಾರಿಗಳು ಘಟಕವನ್ನು ಉದ್ಘಾಟನೆ ಮಾಡಿ ಹಣ ಬಿಡುಗಡೆ ಮಾಡಿದರೆ ತಮ್ಮ ಕೆಲಸ ಮುಗಿಯಿತು ಎಂಬಂತಾಗಿದ್ದು ನಿರ್ವಹಣೆಯ ಕೊರತೆಯಿಂದ ತಾಲೂಕಿನಲ್ಲಿ ಇಂತಹ ಎಷ್ಟೋ ಘಟಕಗಳು ಕೆಟ್ಟು ನಿಂತಿವೆ. ಸರ್ಕಾರ ಹಣ ನೀಡಿದರೂ ಸಂಬಂದಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗ್ರಾಮೀಣರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಜನರ ತೆರಿಗೆ ಹಣದಲ್ಲಿ ಇಂತಹ ಯೋಜನೆಗಳನ್ನು ಸರ್ಕಾರ ತರುತ್ತದೆ ಆದರೆ ಅದೇ ಜನರಿಗೆ ತೊಂದರೆಯಾದರೆ ಸರ್ಕಾರ ಏಕೆ ಕ್ರಮಕೈಗೊಳ್ಳುವುದಿಲ್ಲ.

ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದೆ ಹೋದರೆ ಇಂತಹ ಯೋಜನೆಗಳನ್ನು ತಂದು ಉಪಯೋಗವಿಲ್ಲ. ಈ ಬಗ್ಗೆ ನಾವು ಯಾರನ್ನು ಕೇಳಬೇಕೆಂಬುದು ತಿಳಿಯದಂತಾಗಿದ್ದು ಕೂಡಲೆ ನಮ್ಮ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.