ಆಸ್ಪತ್ರೆಗೆ ಬೀಗ ಹಾಕಿ ಗ್ರಾಮಸ್ಥರ ಪ್ರತಿಭಟನೆ

| Published : Oct 15 2025, 02:06 AM IST

ಸಾರಾಂಶ

ಚಿಕ್ಕೋಬನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹ

ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು

ತಾಲೂಕಿನ ಚಿಕ್ಕೋಬನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡುವಂತೆ ಆಗ್ರಹಿಸಿ ಅಲ್ಲಿನ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ತಾಲೂಕಿನ ಗಡಿಭಾಗ ಚಿಕ್ಕೋಬನಹಳ್ಳಿ ಗ್ರಾಮ ಕುಗ್ರಾಮವಾಗಿದ್ದು ಹತ್ತಾರು ಹಳ್ಳಿಗಳಿಗೆ ಕೇಂದ್ರ ಸ್ಥಾನವಾಗಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದೊಂದು ವರ್ಷದಿಂದ ವೈದ್ಯರು ಮತ್ತು ಶುಶ್ರೂಷಕರು ರೋಗಿಗಳು ಪರದಾಡುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಮುಚ್ಚಿ ಕುಳಿತಿದೆ.

ಮೂರು ತಿಂಗಳಿಗೊಬ್ಬ, ಆರು ತಿಂಗಳಿಗೊಬ್ಬರಂತೆ ವೈದ್ಯರನ್ನು ಇಲ್ಲಿಗೆ ನಿಯೋಜನೆ ಮಾಡುತ್ತಾರೆ. ಯಾವ ವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಮನಸ್ಸು ಮಾಡುತ್ತಿಲ್ಲ ಎಂದಿದ್ದಾರೆ.

ಬಹುತೇಕ ಬಡ ಸಮುದಾಯಗಳು ಹೆಚ್ಚಾಗಿ ವಾಸಿಸುವ ಈ ಭಾಗದ ಜನ ಆಸ್ಪತ್ರೆಗೆ ತೆರಳ ಬೇಕಾದರೆ 40 ಕಿ.ಮೀ ದೂರ ಹೋಗಬೇಕಾಗಿದೆ. ಇಲ್ಲಿನ ಅಸ್ಪತ್ರೆಯಲ್ಲಿ ಉತ್ತಮ ವಾತಾವರಣ ಇದ್ದು ಇಲ್ಲಿನ ಸಿಬ್ಬಂದಿಗಳು ಸಾರ್ವಜನಿಕರಿಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೂ ಇಲ್ಲಿ ಸಿಬ್ಬಂದಿಗಳು ಇಲ್ಲದೆ ಆಸ್ಪತ್ರೆ ನರಳುತ್ತಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ಎದುರಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿಯನ್ನು ನೇಮಿಸಿ ಕೊಡಬೇಕು ಜೊತೆಗೆ ಔಷಧಿ. ಸಿಬ್ಬಂದಿ ಕೊಠಡಿಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಎಂ.ಬಿ ಸಿದ್ದೇಶ್ವರ, ಯಜಮಾನ್ ದಾಸಪ್ಪ, ದಳಪತಿ ಸೂರಯ್ಯ, ಗ್ರಾಪಂ ಅಧ್ಯಕ್ಷ ಓಬಣ್ಣ, ಸದಸ್ಯರಾದ ಓ.ಕರಿಬಸಪ್ಪ, ನಾಗಭೂಷಣ, ಎಚ್‌ಎಮ್ ರವಿ, ಚೆನ್ನಪ್ಪ, ಕೆ.ಓಬಯ್ಯ, ಸಿ.ಬಿ. ಕೊಲ್ಲಪ್ಪ, ಸಂಗಮ ಮೇಘರಾಜ, ಚನ್ನಬಸಮ್ಮ ಗ್ರಾಮದ ಮಹಿಳೆಯರು ಮಕ್ಕಳು ಹಾಜರಿದ್ದರು.