ಸಾರಾಂಶ
ಕುದೂರು ಗ್ರಾಪಂ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಕುದೂರು ಕುದೂರು ಗ್ರಾಮಪಂಚಾಯಿತಿಯಲ್ಲಿ ಅಧಿಕಾರಿಗಳು ಹಾಗೂ ಬಿಲ್ ಕಲೆಕ್ಟರ್‌ಗಳು ಹಣ ದುರ್ಬಳಕೆ ಹಾಗೂ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಸ್ ಎಲ್ ಆರ್ ಶೀಟ್ ಫ್ಯಾಕ್ಟರಿಗೆ ಕಾನೂನು ಬಾಹಿರವಾಗಿ ಎನ್‌ಒಸಿ ನೀಡಲಾಗಿದೆ. ಗ್ರಾಮಠಾಣಾ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಿದ್ದಾರೆ ಎಂದು ದೂರಿದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ ನಂತರ ಸದಸ್ಯರು ಮತ್ತು ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಬಾಲರಾಜ್ , ಕೆ.ಬಿ.ಚಂದ್ರಶೇಖರ್, ಗೀತಾ ಮಂಜುನಾಥ್, ಯತೀಶ್, ಹೇಮಚಂದ್ರ, ದಯಾನಂದ್, ವೆಂಕಟೇಶ್ , ಅನಿಲ್ ,ಮಹೇಶ್‌ಬಾಬು ಮತ್ತಿತರರು ಭಾಗವಹಿಸಿದ್ದರು.