ವಿನಯಕುಮಾರ್ ಮತ್ತೊಮ್ಮೆ ನಾಮಪತ್ರ

| Published : Apr 20 2024, 01:05 AM IST

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಶುಕ್ರವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು. ಏಪ್ರಿಲ್ 17ರಂದು ರೋಡ್ ಶೋ ನಡೆಸಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಈಗ ಮೂರನೇ ಬಾರಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಶುಕ್ರವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು.

ಏಪ್ರಿಲ್ 17ರಂದು ರೋಡ್ ಶೋ ನಡೆಸಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಈಗ ಮೂರನೇ ಬಾರಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು, ಜಿಲ್ಲಾದ್ಯಂತ ಪಾದಯಾತ್ರೆ ನಡೆಸಿದ್ದೇನೆ. ಗ್ರಾಮೀಣ ಜನರ ಸಮಸ್ಯೆಗಳು, ಸಂಕಷ್ಟಗಳನ್ನು ಅರಿತಿದ್ದೇನೆ. ಕುಟುಂಬ ರಾಜಕಾರಣದ ವಿರುದ್ಧದ ಸಿಟ್ಟು ಹಳ್ಳಿ ಮಾತ್ರವಲ್ಲ, ದಾವಣಗೆರೆ ನಗರದಲ್ಲಿಯೂ ಇದೆ. ಜನರು ಬಹಿರಂಗವಾಗಿ ಹೇಳದಿದ್ದರೂ ಎರಡೂ ಪಕ್ಷಗಳ ನಾಯಕರು, ಕಾರ್ಯಕರ್ತರಲ್ಲಿಯೂ ಅಸಮಾಧಾನ ಇದೆ. ಜನರು ಸ್ವಾಭಿಮಾನಿಯ ಸ್ವಾಭಿಮಾನದ ಸ್ಪರ್ಧೆ ಕುರಿತಂತೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ. ಹಾಗಾಗಿ, ಈ ಬಾರಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

- - -

-19ಕೆಡಿವಿಜಿ42ಃ:

ದಾವಣಗೆರೆಯಲ್ಲಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಶುಕ್ರವಾರ 3ನೇ ಬಾರಿಗೆ ನಾಮಪತ್ರ ಸಲ್ಲಿಸಿದರು.