ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್‌ ದೂರು

| Published : Mar 19 2024, 12:48 AM IST

ಸಾರಾಂಶ

ಬಿಜೆಪಿ ಸದಸ್ಯರೊಬ್ಬರು ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್‌ ಬುಕ್‌ನಲ್ಲಿ ಪ್ರಸಾರ ಮಾಡಿದ್ದಾರೆಂದು ಆರೋಪಿಸಿ ಕೊಡಗು ಕಾಂಗ್ರೆಸ್‌ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.

ಮಡಿಕೇರಿ: ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಸುಳ್ಳು, ಪ್ರಚೋದನಾಕಾರಿ ಪೋಸ್ಟನ್ನು ಫೇಸ್‌ ಬುಕ್‌ನಲ್ಲಿ ಪ್ರಸಾರ ಮಾಡಿದ್ದಾರೆಂದು ಆರೋಪಿಸಿ ಕೊಡಗು ಕಾಂಗ್ರೆಸ್‌ನಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಕೊಡಗು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.ಕೊಡಗು ಜಿಲ್ಲಾ ಕಾಂಗ್ರೆಸ್ ಪಂಚಾಯತ್‌ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ದಾಖಲೆಗಳೊಂದಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯ ಸಮಿತಿ ಪಧಾಧಿಕಾರಿಗಳಾದ ಯಮುನಾ ಚಂಗಪ್ಪ ಅವರು ಮಾ.17ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್, ಸ್ಫೋಟಕ ಮಾಹಿತಿ ನೀಡಿದ ಎಸ್.ಬಿ.ಐ. ಎಂಬ ಸುಳ್ಳು ಪೋಸ್ಟ್ ಹರಿಯ ಬಿಟ್ಟಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆಗೆ ವಿರುದ್ಧವಾಗಿದ್ದು ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪೋಸ್ಟ್ ಆಗಿದೆ ಎಂದು ಆರೋಪಿಸಿದ್ದಾರೆ.ಆದ್ದರಿಂದ ಕೂಡಲೇ ಯಮುನಾ ಚಂಗಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಜಿಲ್ಲಾಧಿಕಾರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.