ಸಾರಾಂಶ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕೆಆರ್‌ಎಸ್ ಪಕ್ಷ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದೆ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕೆಆರ್‌ಎಸ್ ಪಕ್ಷ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕನಕಪುರ ತಾಲೂಕಿನ ಕೋಟೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆ ಹಾಗೂ ಸುಗಮಕಾರರಾಗಿ ಕೆಲಸ ನಿರ್ವಹಿಸುತ್ತಿರುವ ರೂಪಾರವರು ಮಾರ್ಚ್ 20ರಂದು ಕನಕಪುರದ ಕಾಂಗ್ರೆಸ್ ಕಚೇರಿಯ ಸಭೆಯಲ್ಲಿ ಹಾಗೂ ಏಪ್ರಿಲ್ 5ರಂದು ಕನಕಪುರದ ಅರಳಾಳು ಗ್ರಾಮದ ವಾಸು ತೋಟದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ವೇದಿಕೆ ಹಂಚಿಕೊಂಡು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಕ್ರಮ ಜರುಗಿಸಬೇಕೆಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಮಹಮದ್ ಮುಸದಿಕ್ ಪಾಷರವರು ಒತ್ತಾಯಿಸಿದ್ದಾರೆ.