ಸಾರಾಂಶ
ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್‌ಸ್ಟಿಟ್ಯೂಷನ್ಸ್ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಸಭಾಂಗಣದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಯನ್ಸ್ ಜಿಲ್ಲೆ 317ಎಫ್‌ನ ಸಂಚಾರ ಜಾಗೃತಿ ವಿಭಾಗದ ಮುಖ್ಯಸ್ಥ ಡಿ.ಎಸ್.ನರಸಿಂಹಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಇಂದು ದೇಶದಲ್ಲಿ ರಸ್ತೆ ಅಪಘಾತಗಳಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ನಿರ್ಲಕ್ಷ್ಯವೇ ಇದಕ್ಕೆ ಪ್ರಧಾನ ಕಾರಣವಾಗಿದೆ ಎಂದರು.ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಎಂಬುದು ನಿಯಮ. ಆದರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಲ್ಮೆಟ್ ಧರಿಸಿ ಚಾಲನೆ ಮಾಡುವವರು ಬಹಳ ಕಡಿಮೆ. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ನಿಷಿದ್ದ. ನಮ್ಮ ಸಣ್ಣ ನಿರ್ಲಕ್ಷ್ಯವೂ ನಮ್ಮ ಬದುಕಿಗೆ ಸಂಚಕಾರ ತರಬಹುದು ಎಂಬ ಪ್ರಜ್ಞೆ ಎಲ್ಲರಲ್ಲೂ ಮೂಡಬೇಕು. ಆಗ ಮಾತ್ರ ಈ ವಿಚಾರದಲ್ಲಿ ಬದಲಾವಣೆ ನಿರೀಕ್ಷಿಸಲು ಸಾಧ್ಯವಾಗುತ್ತದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್ ಮಾತನಾಡಿದರು. ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ಎಸ್.ರವಿಕುಮಾರ್, ಉಪಾಧ್ಯಕ್ಷ ಮುನಿರಾಮೇಗೌಡ ಉಪಸ್ಥಿತರಿದ್ದರು.ಫೋಟೋ-
9ಕೆಡಿಬಿಪಿ3- ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು.