ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸದಿದ್ದರೇ ಉಗ್ರ ಹೋರಾಟ: ಮುತಾಲಿಕ್ ಎಚ್ಚರಿಕೆ

| Published : Jun 07 2024, 12:31 AM IST

ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸದಿದ್ದರೇ ಉಗ್ರ ಹೋರಾಟ: ಮುತಾಲಿಕ್ ಎಚ್ಚರಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿದವನನ್ನು ಬಿಟ್ಟು ಕೇವಲ ಮೋದಿ ಹಮಾರಾ ಕುತ್ತಾ ಹೈ ಎಂದಿದ್ದ ವ್ಯಕ್ತಿಯನ್ನು ಬಂದಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸುವಲ್ಲಿ ಪೊಲೀಸ್‌ರು ವಿಫಲರಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಲೋಕಸಭೆ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿದವನನ್ನು ಬಿಟ್ಟು ಕೇವಲ ಮೋದಿ ಹಮಾರಾ ಕುತ್ತಾ ಹೈ ಎಂದಿದ್ದ ವ್ಯಕ್ತಿಯನ್ನು ಬಂದಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸುವಲ್ಲಿ ಪೊಲೀಸ್‌ರು ವಿಫಲರಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ಲೋಕಸಭೆ ಮತ ಎಣಿಕೆ ದಿನ ಎರಡು ಘಟನೆಗಳಿಗೆ ವರದಿಯಾಗಿತ್ತು. ಪ್ರಧಾನಿ ಮೋದಿಯವರಿಗೆ ಹಮಾರಾ ಕುತ್ತಾ ಎಂದಿದ್ದು. ಇನ್ನೊಂದು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು.ಮೋದಿ ಹಮಾರಾ ಕುತ್ತಾ ಹೈ ಎಂಬ ಘೋಷಣೆ ಕೂಗಿದ ಚಿಕ್ಕೋಡಿ ಪೊಲೀಸರು ಜಮೀರ್ ನಾಯಿಕವಾಡಿ ಎಂಬ ವ್ಯಕ್ತಿಯನ್ನು ಬಂದಿಸಿದ್ದಾರೆ. ಆದರೆ, ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂದಿಸಿಲ್ಲ ಏಕೆ ಎಂದು ಪ್ರಶ್ನಿಸಿದರು.ಚಿಕ್ಕೋಡಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ ವ್ಯಕ್ತಿಯನ್ನು ಬಂಧನ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು. ಪಾಕಿಸ್ತಾನ ಜಿಂದಾಬಾದ್ ಪ್ರಕರಣದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ನೀಡಬೇಕು ಎಂದು ಆಗ್ರಹಿಸಿದರು.ಕಾಂಗ್ರೆಸ್ ನಾಯಕರು ದೇಶದ್ರೋಹ ಹೇಳಿಕೆ ನೀಡಿದ್ದ ವ್ಯಕ್ತಿಯ ರಕ್ಷಣೆಗೆ ಮುಂದಾಗಿರುವುದು ದುರಂತ. ಆತನನ್ನು ಕಾಂಗ್ರೆಸ್ ಒದ್ದು ಒಳಗೆ ಹಾಕುವ ಕೆಲಸ ಮಾಡಬೇಕಿತ್ತು. ಕಾಂಗ್ರೆಸ್ ಸರ್ಕಾರ ಮುಸ್ಲಿಂರ ತುಷ್ಟೀಕರಣ ಮಾಡುತ್ತಿದೆ. ಹೀಗಾಗಿ ಭಾರತದಲ್ಲಿ ಕಾಂಗ್ರೆಸ್ ಬೆಂಬಲದಿಂದ ಮುಸ್ಲಿಂರು ಉದ್ದಟತನದಿಂದ ಮೆರೆಯುತ್ತಿದ್ದಾರೆ ಎಂದು ಕಿಡಿಕಾರಿದರು.