ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ವಿರಾಜಪೇಟೆ
ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ನಡೆದ ಈ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಾ. ಸುಭಾಷ್ ನಾಣಯ್ಯ ನೇತೃತ್ವದಲ್ಲಿ ಬಿಜೆಪಿ ಹಲವು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.ಎಲ್ಲರಿಗೂ ಪಕ್ಷದ ಶಾಲು ಹೊದಿಸಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡ ಶಾಸಕರು, ಸಮಾಜದ ಪರ ಚಿಂತನೆ ಬೆಳೆಸಿಕೊಂಡು ನಾಡಿನ ಏಳಿಗೆಗೆ ಶ್ರಮಿಸುವ ಉದ್ದೇಶದಿಂದ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಎಲ್ಲರನ್ನೂ ಸ್ವಾಗತಿಸಿದರು.
ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ ಶಾಸಕರು, ಉತ್ತಮ ಆಡಳಿತ ಹಾಗೂ ಜನಪರ ಕಾಳಜಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ ಎಂದು ಹೇಳಿದರು.ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪಕ್ಷದ ಮುಖಂಡರು ಪ್ರಚಾರ ಸಮಿತಿ ಅಧ್ಯಕ್ಷರು ಟಿ.ಪಿ. ರಮೇಶ್, ಹಿರಿಯ ಮುಖಂಡರು ಪೆಮ್ಮಂಡ ಪೊನ್ನಪ್ಪ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಡಿಸಿಸಿ ಸದಸ್ಯರು ಅಬ್ದುಲ್ ರೆಹಮಾನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರೀರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಜಿಪಂ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಸಾಮಾಜಿಕ ಜಾಲತಾಣದ ಅಧ್ಯಕ್ಷರು ಸೂರಜ್ ಹೊಸೂರು, ಸಾರ ಚಂಗಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಕೆಪಿಪಿಸಿ ಒಬಿಸಿ ಘಟದ ಉಪಾಧ್ಯಕ್ಷ ಕೆ.ಎಂ. ಬಾಲಕೃಷ್ಣ, ಎಸ್.ಟಿ. ಘಟದ ಅಧ್ಯಕ್ಷ ಜಯೇಂದ್ರ, ಅಯ್ಯಪ್ಪ, ಪೊನ್ನಂಪೇಟೆ ಪ್ರಚಾರ ಸಮಿತಿ ಅಧ್ಯಕ್ಷ ಟಾಟ್ಟು ಮೊಣ್ಣಪ್ಪ, ವಿರಾಜಪೇಟೆ ಪ್ರಚಾರ ಸಮಿತಿ ಅಧ್ಯಕ್ಷ ಮತೀನ್ ಪಾಲ್ಗೊಂಡಿದ್ದರು.