ಸಾರಾಂಶ
ವಿರಾಜಪೇಟೆ ಗೋಣಿಕೊಪ್ಪ ರಸ್ತೆಯ ಶಾನ್ಬೋಗ್ ಕಟ್ಟಡದಲ್ಲಿರುವ ಎಟೆಕ್ ಎಜುಕೇಶನಲ್ ಸೆಂಟರ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶಂಕರಾಚಾರ್ಯ ಟ್ರಸ್ಟ್ ಹಾಗೂ ಮೈಸೂರಿನ ನೈಸ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳ ನಡೆಯಿತು. ಕೊಡಗಿನ ಸುಮಾರು 160 ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿರಾಜಪೇಟೆ ಗೋಣಿಕೊಪ್ಪ ರಸ್ತೆಯ ಶಾನ್ಬೋಗ್ ಕಟ್ಟಡದಲ್ಲಿರುವ ಎಟೆಕ್ ಎಜುಕೇಶನಲ್ ಸೆಂಟರ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶಂಕರಾಚಾರ್ಯ ಟ್ರಸ್ಟ್ ಹಾಗೂ ಮೈಸೂರಿನ ನೈಸ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳ ನಡೆಯಿತು.ಮೇಳ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಎಸ್.ಎಚ್. ಮತೀನ್, ಮಕ್ಕಳು ವಿದ್ಯಾಭ್ಯಾಸ ಮುಗಿಸಿದ ಬಳಿಕ ಅವರ ಅರ್ಹತೆಗೆ ತಕ್ಕ ಉದ್ಯೋಗ ನಿರ್ಧರಿಸಲು ಮೇಳಗಳು ಸಹಕಾರಿ ಎಂದರು.
ಪುರಸಭೆ ಮಾಜಿ ಉಪಾಧ್ಯಕ್ಷೆ ತಸ್ನೀಂ ಅಕ್ತರ್ ಮಾತನಾಡಿ, ಸ್ಥಳೀಯ ಮಕ್ಕಳಿಗೆ ತಮ್ಮ ಕೌಶಲ್ಯ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಉದ್ಯೋಗ ವಿನಿಮಯ ಮಾಡಿಕೊಳ್ಳಲು ಈ ಸಂಸ್ಥೆಯು ಕೊಡಗಿನಲ್ಲಿ ಮೊದಲ ಬಾರಿಗೆ ಈ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಎ ಟೆಕ್ ಎಜುಕೇಶನಲ್ ಸಂಸ್ಥೆ ಪ್ರಮುಖ ಶಫೀರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನು ಬಳಸಿಕೊಂಡು ಉತ್ತಮ ಕೆಲಸ ಮಾಡಬೇಕು, ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಬೇಕು ಎಂದರು.
ಸಂಸ್ಥೆಯ ಪ್ರಮುಖ ಖಮರುದ್ದಿನ್ ದಿಕ್ಸೂಚಿ ಭಾಷಣ ನೆರವೇರಿಸಿದರು.ಕೊಡಗಿನ ಸುಮಾರು 160 ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿದ್ದರು.
ಆಶೀರ್ವಾದ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಸಿದ್ದಿಖ್ ಹಂಸ, ಸ್ಥಳೀಯ ಸಂಸ್ಥೆಯ ಮೇಲ್ವಿಚಾರಕ ಸೋನ ಅನನ್ಶವ, ಸಾಬೀರ ಮತ್ತಿತರರಿದ್ದರು.