ಸಾರಾಂಶ
ವಿದ್ಯಾಸಂಸ್ಥೆ ಅಭಿವೃದ್ದಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪಟ್ಟಡ ರೀನಾ ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ. ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.
ಕನ್ನಡ್ರಭ ವಾರ್ತೆ ವಿರಾಜಪೇಟೆ
ವಿದ್ಯಾಸಂಸ್ಥೆ ಅಭಿವೃದ್ದಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪಟ್ಟಡ ರೀನಾ ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ.ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.
ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾಸಂಸ್ಥೆ ಬೆಳವಣಿಗೆಗೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯ. ಹಳೆಯ ವಿದ್ಯಾರ್ಥಿಗಳು ವಿದ್ಯಾ ಸಂಸ್ಥೆಯ ಬೆನ್ನೆಲುಬಿದ್ದಂತೆ ಸಂಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಅವರ ಮೇಲಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಬೆನಡಿಕ್ಟ್ ಆರ್ ಸಲ್ಡಾನ ಮಾತನಾಡಿ, ಕಾವೇರಿ ಕಾಲೇಜನ್ನು ಜಗತ್ತಿಗೆ ಪರಿಚಯಿಸು ಕಾರ್ಯವನ್ನು ಹಳೆ ವಿದ್ಯಾರ್ಥಿಗಳು ಮಾಡುತಿದ್ದಾರೆ. ಹಳೆ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯನ್ನು ಹೊರ ಜಗತ್ತಿಗೆ ಪರಿಚಯಿಸುವ ರಾಯಭಾರಿಗಳು ಎಂದರು.
ನಂತರ ಹಳೆ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾಲೇಜಿನ ಪ್ರಾಂಶುಪಾಲ ಬೆನಡಿಕ್ಟ್ ಆರ್ ಸಲ್ದಾನ, ಉಪಾಧ್ಯಕ್ಷರಾಗಿ ವಿದ್ಯಾ ಬಿ.ಟಿ. , ಕಾರ್ಯದರ್ಶಿ ಪುಣ್ಯ ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿ ಹರೀಶ್ ಎಚ್.ಎಂ. , ಖಜಾಂಚಿಯಾಗಿ ರೇಷ್ಮಾ ಎ.ಎನ್. , ಸದಸ್ಯರಾಗಿ ಶಿಲ್ಪ ಕೆ.ಪಿ. , ಅಂಮ್ರಿನ್ ತಾಜ್, ಸೋಮಣ್ಣ ಸಿ.ಎಂ . , ಮಂಜುಳಾ, ಕರಣ್, ಮಮತಾ , ಲಸಿಕ ಕಾರ್ಯಪ್ಪ , ಗುಲ್ನಾರ್ ಬಾನು ಆಯ್ಕೆಯಾದರು.ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ಗಾಯತ್ರಿ ಕೆ.ಪಿ., ಕಾರ್ಯದರ್ಶಿ ಪ್ರಿಯಾ ಮುದ್ದಪ್ಪ, ಖಜಾಂಚಿ ರಶ್ಮಿ ಇದ್ದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು . ಕಾಲೇಜಿನ ಹಳೆಯ ವಿದ್ಯಾರ್ಥಿಗಳು , ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.