ಸಾರಾಂಶ
ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧಿಕಾರಾವಧಿ ಮುಂದುವರಿಸಲು ಸಭೆ ಸರ್ವಾನುಮತದ ತೀರ್ಮಾನ ಕೈಗೊಂಡಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.ಗೌರವ ಕಾರ್ಯದರ್ಶಿ ಬಯವಂಡ ಇಂದಿರಾ ಬೆಳ್ಯಪ್ಪ ತಪ್ಪಡಕ ಕಟ್ಟಿ, ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ತಾತಂಡ ಯಶು ಕಭೀರ್ ವಾರ್ಷಿಕ ಲೆಕ್ಕ ಪತ್ರ ವರದಿ ಮಂಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಒಕ್ಕೂಟ ನಡೆದು ಬಂದ ಹಾದಿಯನ್ನು ಮೆಲಕು ಹಾಕಿದರು. ಎಲ್ಲರಿಗೂ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಸ್ವ ಇಚ್ಛೆಯಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಯವರಿಗೆ ನೀಡಿದರು. ಆದರೆ ಮಹಾಸಭೆಯಲ್ಲಿ ಅವರ ರಾಜೀನಾಮೆಯನ್ನು ಸ್ವೀಕರಿಸದೆ, ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಒಕ್ಕೊರಲಿನಿಂದ ಮನವಿ ಮಾಡಿದರು.ಸರ್ವಾನುಮತದಿಂದ ಅವರೇ ಅಧಿಕಾರದಲ್ಲಿ ಮುಂದುವರಿಯುವಂತೆ ತೀರ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿತ ಜ್ಯೋತಿಷಿ ಕರವಟ್ಟಿರ ಶಶಿ ಸುಬ್ರಮಣಿ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕರವಟ್ಟಿರ ಶಶಿ ಸುಬ್ರಮಣಿ, ಕೊಡವ ಸಂಪ್ರದಾಯ ಆಚಾರ, ವಿಚಾರದ ಬಗ್ಗೆ ಮಾತನಾಡಿದರು.ಸಲಹಾ ಸಮಿತಿ ಸದಸ್ಯರಾಗಿರುವ ಬಿದ್ದಂಡ ರಾಣಿ ಉತ್ತಯ್ಯ, ನಾಯಕಂಡ ಬೇಬಿ ಚಿಣ್ಣಪ್ಪ, ಚಪ್ಪಂಡ ಲಲಿತ ಇದ್ದರು.
ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.