ಸಾರಾಂಶ
ಕನ್ನಡಪ್ರಭವಾರ್ತೆವಿರಾಜಪೇಟೆವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾದ ‘ನುಡಿನೃತ್ಯ ಸಂಭ್ರಮ-೨೪’ಕ್ಕೆ ಚಾಲನೆ ನೀಡಲಾಯಿತು.ಕನ್ನಡ ಭಾಷಾ ವಿಭಾಗ ಹಾಗೂ ಸಾಹಿತ್ಯ ಸಂಘ ಮತ್ತು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಹಭಾಗಿತ್ವದಲ್ಲಿ ಈ ವರ್ಷ ‘ನುಡಿ ನೃತ್ಯ ಸಂಭ್ರಮ-24’ ನುಡಿಹಬ್ಬ ಸೈಂಟ್ ಆವರಣದಲ್ಲಿ ಜರುಗುತ್ತಿದ್ದು ಇದರ ಪ್ರಯುಕ್ತ ಮೊದಲಿಗೆ ಕೋಟಿ ಕಂಠ ಗಾಯನವನ್ನು ಎಲ್ಲ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ಎಲ್ಲ ವಿದ್ಯಾರ್ಥಿಗಳು ಹಾಡಿದರು.ನಂತರ ಪದವಿ ವಿಭಾಗದ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು, ಸೈಂಟ್ ಆನ್ಸ್ ನುಡಿನೃತ್ಯ ಸಂಭ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ, ನಗಾರಿ ಬಾರಿಸುವುದರ ಮೂಲಕ ನುಡಿ ನೃತ್ಯ ಸಂಭ್ರಮ-24 ಕ್ಕೆ ಚಾಲನೆ ನೀಡಿದರು. ಕನ್ನಡ ವಿದ್ಯಾರ್ಥಿ ಬಳಗದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನವನ್ನು ನೀಡಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮದಲೈ ಮುತ್ತು, ನ.೨೦ರಂದು ನಡೆಯುವ ನುಡಿನೃತ್ಯ ಸಂಭ್ರಮಕ್ಕೆ ಶುಭಕೋರಿದರು.ಇದೇ ಸಂದರ್ಭದಲ್ಲಿ ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ., ಕನ್ನಡ ವಿಭಾಗದ ಪ್ರಾಧ್ಯಾಪಕಿ ಪ್ರತಿಮಾ ರೈ, ವಿಭಾಗಗಳ ಮುಖ್ಯಸ್ಥರು, ಎಲ್ಲ ಸಹ ಪ್ರಾಧ್ಯಾಪಕರು, ಕನ್ನಡ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳು ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಅರ್ಥಶಾಸ್ತ್ರ ಪ್ರಾಧ್ಯಾಪಕ ಬಿ.ಎನ್. ಶಾಂತಿ ಭೂಷಣ್ ಕಾರ್ಯಕ್ರಮ ನಿರೂಪಿಸಿದರು.