ವಿರಾಜಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಭಾನುವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿಸರ್ಜಿಸಲಾಯಿತು.
ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಭಾನುವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿಸರ್ಜಿಸಲಾಯಿತು.ಸಿದ್ದಾಪುರ ರಾಯಲ್ ಯುವಕ ಸಂಘ, ಮಾಹಾ ಗಣಪತಿ ಮಿತ್ರ ಮಂಡಳಿ ವತಿಯಿಂದ ಶ್ರೀ ಮುತ್ತಪ್ಪ ಭಗವತಿ ದೇವಾಲಯ ಹಾಗೂ ಶ್ರೀ ಸಿದ್ದಿ ವಿನಾಯಕ ಗೆಳೆಯರ ಬಳಗ ಅಂಬೇಡ್ಕರ್ ನಗರ ವತಿಯಿಂದ ಆಯೋಜಿಸಲಾಗಿದ್ದ ಗೌರಿ-ಗಣೇಶೋತ್ಸವದ ವಿಸರ್ಜನೋತ್ಸವದ ಅಂಗವಾಗಿ ಭಾನುವಾರ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಮಹೋತ್ಸವ ನಡೆಯಿತು. ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು ಪಟ್ಟಣದ. ವಿವಿಧ ಬೀದಿಗಳಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಡಿ ಜೆ ಸೌಂಡಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಯುವಕರು ಹೆಜ್ಜೆ ಹಾಕಿ ಮೆರವಣಿಗೆಯ ಮೆರುಗು ಹೆಚ್ಚಿಸಿದರ.
ಭಕ್ತರು ಗಣೇಶನಿಗೆ ಜಯಘೋಷ ಮೊಳಗಿಸುತ್ತಾ ಶೋಭಾಯಾತ್ರೆಯಲ್ಲಿ ಸಾಗಿ ಬಳಿಕ ಗಣೇಶ ಮೂರ್ತಿಗಳನ್ನು ನೆಲ್ಯಹುದಿಕೇರಿ ಸಮೀಪದ ಕಾವೇರಿ ನದಿಯಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಸರ್ಜಿಸಲಾಯಿತು.ವಿಸರ್ಜನೋತ್ಸವದ ಅಂಗವಾಗಿ ಪ್ರತಿಷ್ಠಾಪನೆ ಸ್ಥಳಗಳಲ್ಲಿ ಗಣೇಶನಿಗೆ ವಿವಿಧ ಪೂಜೆಗಳು ಹಾಗೂ ಅನ್ನ ಸಂತರ್ಪಣೆ ನಡೆಯಿತು.