ಪ್ರತಿಭಾವಂತರನ್ನು ಸೃಷ್ಟಿಸಿದ ಶಿಲ್ಪಿ ವಿಶುಕುಮಾರ್‌: ಮೊಯ್ಲಿ

| Published : Nov 18 2024, 12:06 AM IST

ಸಾರಾಂಶ

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬಾಬು ಶಿವ ಪೂಜಾರಿ, ನಮ್ಮ ತುಳು ಸಂಸ್ಕೃತಿ ಎಲ್ಲ ಜನಾಂಗದವರನ್ನು ಸೇರಿಸಿಕೊಂಡು ಒಟ್ಟಿಗೆ ಕೂಡಿ ಬಾಳಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ದಂತ ಕತೆಯಾಗಿದ್ದ ವಿಶು ಕುಮಾರ್‌ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ವಿಶುಕುಮಾರ್‌ ದತ್ತಿನಿಧಿ ಸಮಿತಿ ವತಿಯಿಂದ, ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅತಿಥ್ಯದಲ್ಲಿ ನಗರದ ತುಳು ಭವನದಲ್ಲಿ ಹಿರಿಯ ಪತ್ರಕರ್ತ, ಸಾಹಿತಿ ಬಾಬು ಶಿವ ಪೂಜಾರಿ ಅವರಿಗೆ ಇತ್ತೀಚೆಗೆ 2024ನೇ ಸಾಲಿನ ವಿಶುಕುಮಾರ್‌ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿಶುಕುಮಾರ್‌ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರಾವಳಿಯ ಕಳ್ಳ ಸಾಗಾಟಗಳ ಬಗ್ಗೆ ಬರೆಯಲು ಹಿಂಜರಿಯುತ್ತಿದ್ದಾಗ ವಿಶುಕುಮಾರ್‌ ದಿಟ್ಟತನದಿಂದ ಅದನ್ನು ಬರೆದವರು ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬಾಬು ಶಿವ ಪೂಜಾರಿ, ನಮ್ಮ ತುಳು ಸಂಸ್ಕೃತಿ ಎಲ್ಲ ಜನಾಂಗದವರನ್ನು ಸೇರಿಸಿಕೊಂಡು ಒಟ್ಟಿಗೆ ಕೂಡಿ ಬಾಳಿದೆ ಎಂದರು.

ಪ್ರಭಾಕರ್‌ ನೀರುಮಾರ್ಗ ಯುವವಾಹಿನಿ ಯುವ ಸಾಹಿತಿ ಪ್ರಶಸ್ತಿಯನ್ನು ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ. ಪೂಜಾರಿಗೆ ಪ್ರದಾನ ಮಾಡಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್‌. ಧರ್ಮ ಅಧ್ಯಕ್ಷತೆ ವಹಿಸಿದ್ದರು. ಗುರುಬೆಳದಿಂಗಳು ಫೌಂಡೇಶನ್‌ ಅಧ್ಯಕ್ಷ ಪದ್ಮರಾಜ್‌ ಆರ್‌., ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್‌ ಕೆ. ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷರಾದ ಮನೀಷಾ ರೂಪೇಶ್‌, ಕಾರ್ಯದರ್ಶಿ ಸಚಿನ್‌ ಜಿ. ಅಮೀನ್‌, ವಿಶುಕುಮಾರ್‌ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್‌ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಇದ್ದರು.

ಟಿ. ಶಂಕರ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಮಿತೇಶ್‌ ಬಾರ್ಯ ಮತ್ತು ರೇಣುಕಾ ಕಣಿಯೂರು ನಿರೂಪಿಸಿದರು.