ಸಾರಾಂಶ
ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಗಣೇಶ್ ಶೆಟ್ಟಿ, ಗ್ರಾಮೀಣ ಕ್ರೀಡಾ ಪಟು ಕಿರಣ್ ದೇವಾಡಿಗ ಹಾಗೂ ಶಿವದೂತ ಗುಳಿಗ ನಾಟಕ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಲ್ ಬೈಲ್ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಕೋಟ
ಇಂದು ಮಾನವೀಯತೆಗೆ ಮಿಡಿಯುವ ಮನಸ್ಸುಗಳು ಕಡಿಮೆಯಾಗುತ್ತಿರುವುದು ದುರದೃಷ್ಟಕರ ಸಂಗತಿ. ನೋವಿಗೆ ಸ್ಪಂದಿಸುವ ಪ್ರವೃತ್ತಿ ಎಲ್ಲ ಕಾರ್ಯಗಳಿಗಿಂತ ಶ್ರೇಷ್ಠವಾದುದು. ಆದ್ದರಿಂದ ಮಕ್ಕಳಿಗೆ ಬದುಕಿಗೆ ಬಹುಮುಖ್ಯ ಅಂಗವಾಗಿರುವ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿಯೇ ಆರಂಭವಾಗಬೇಕು ಎಂದು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದರು.ಅವರು ಇಲ್ಲಿನ ಸಾಹೇಬರಕಟ್ಟೆಯ ಶ್ರೀ ವಿನಾಯಕ ಯುವಕ ಮಂಡಲದ ಆಶ್ರಯದಲ್ಲಿ ನಡೆದ ೧೩ ನೇ ವರ್ಷದ ಶ್ರೀ ಶಾರದಾ ಮಹೋತ್ಸವ - ನಮ್ಮೂರ ದಸರಾದಲ್ಲಿ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ ಸ್ವೀಕರಿಸಿ ಮಾತನಾಡುತ್ತಿದ್ದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ವಿನಾಯಕ ಯುವಕ ಮಂಡಲ ವಿಶಿಷ್ಟ ಕಾರ್ಯಕ್ರಮಗಳ ಆಯೋಜನೆ ಮೂಲಕ ಯುವಕ ಮಂಡಲದ ಸ್ಥಾಪನೆಯ ಸಾರ್ಥಕತೆಯನ್ನು ಕಂಡುಕೊಳ್ಳಿತ್ತಿದ್ದೆ . ವಿಶು ಶೆಟ್ಟಿ ಯುವ ಜನಾಂಗಕ್ಕೆ ಮಾದರಿ ಎಂದರು.ವಿದ್ವಾನ್ ಟಿ. ವಾಸುದೇವ ಜೋಯಿಸ್ ತಟ್ಟುವಟ್ಟು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಗಣೇಶ್ ಶೆಟ್ಟಿ, ಗ್ರಾಮೀಣ ಕ್ರೀಡಾ ಪಟು ಕಿರಣ್ ದೇವಾಡಿಗ ಹಾಗೂ ಶಿವದೂತ ಗುಳಿಗ ನಾಟಕ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಲ್ ಬೈಲ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಅಮೃತ್ ಪೂಜಾರಿ ವಹಿಸಿದ್ದರು. ಉದ್ಯಮಿ ಗಣೇಶ್ ಪ್ರಸಾದ್ ಕಾಂಚನ್, ಶಿರಿಯಾರ ವ್ಯ.ಸೇ.ಸಹಕಾರಿ ಸಂಘದ ಅಧ್ಯಕ್ಷ ಪ್ರದೀಪ್ ಬಲ್ಲಾಳ್, ಸ್ವಾಗತ್ ವಿ.ಸ. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಎನ್. ಪೂಜಾರಿ, ಉದ್ಯಮಿ ಶರತ್ ಕುಮಾರ್ ಶೆಟ್ಟಿ, ಯುವಕ ಮಂಡಲದ ಕಾರ್ಯದರ್ಶಿ ಗಿರೀಶ್ ನಾಯ್ಕ ಉಪಸ್ಥಿತರಿದ್ದರು.