ಸಾರಾಂಶ
ವಿಶ್ವಕರ್ಮ ಜಯಂತಿ । ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ತಾಲೂಕು ಅಧ್ಯಕ್ಷ
ಕನ್ನಡಪ್ರಭವಾರ್ತೆ ಹೊಸಕೋಟೆಕಲೆ ಹಾಗೂ ವಾಸ್ತುಶಿಲ್ಪಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಹೆಸರುವಾಸಿಯಾಗಿದ್ದು ದೇಶ, ವಿದೇಶಗಳಲ್ಲಿ ಕೂಡ ಪ್ರಸಿದ್ಧಿಯನ್ನು ಪಡೆದಿದ್ದಾರೆ ಎಂದು ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ತಾಲೂಕು ಅಧ್ಯಕ್ಷ ಲಕ್ಷ್ಮೀನಾರಾಯಣಾಚಾರಿ ತಿಳಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ರಾಜಕೀಯವಾಗಿ ಸಾಮಾಜಿಕವಾಗಿ ಸಾಕಷ್ಟು ಹಿಂದುಳಿದಿರುವ ನಮ್ಮ ಸಮುದಾಯಕ್ಕೆ ಸರ್ಕಾರ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕಿದೆ. ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆಪಿ ನಂಜುಂಡಿ ಅವರ ಹೋರಾಟದ ಪ್ರತಿಫಲವಾಗಿ ಸರ್ಕಾರದ ಮಟ್ಟದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡುವಂತಾಗಿದೆ. ಅದರಿಂದ ಮುಂದಿನ ದಿನಗಳಲ್ಲಿ ಸರ್ಕಾರ ನಮ್ಮ ಸಮುದಾಯಕ್ಕೆ ಬೇಕಾದ ಅಗತ್ಯ ನೆರವನ್ನು ಒದಗಿಸಿ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡಬೇಕು ಎಂದು ಹೇಳಿದರು.
ಉಪ ತಹಸೀಲ್ದಾರ್ ನರೇಂದ್ರ ಬಾಬು ಮಾತನಾಡಿ, ವಿಶ್ವಕರ್ಮ ಸಮುದಾಯ ಎಲ್ಲಾ ಜಾತಿಗಳಿಗಿಂತ ಭಿನ್ನವಾಗಿದ್ದು ಕಲೆ ಮತ್ತು ವಾಸ್ತುಶಿಲ್ಪದ ಮೂಲಕ ಪ್ರತಿ ಮನೆ ಮನೆಯಲ್ಲೂ ಅವರನ್ನು ಸ್ಮರಿಸುವಂತಹ ಕೆಲಸವಾಗಿದೆ. ಪ್ರಮುಖವಾಗಿ ವಿಶ್ವಕರ್ಮ ಜಯಂತಿಯು ಭಾರತೀಯ ಬರಹಗಳು ಹಾಗೂ ಧರ್ಮ ಗ್ರಂಥಗಳಲ್ಲಿ ಆಳವಾದ ಐತಿಹಾಸಿಕ ಬೇರುಗಳನ್ನು ಊರಿದೆ. ಇಂತಹ ವಿಶ್ವಕರ್ಮರ ಆದರ್ಶಗಳು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕು ಎಂದರು.ವಿಶ್ವಕರ್ಮ ಸಮಾಜ ಸೇವಾ ಟ್ರಸ್ಟ್ ಕಾರ್ಯದರ್ಶಿ ಅಣ್ಣಯ್ಯಾಚಾರಿ, ಖಜಾಂಚಿ ಭದ್ರಾಚಾರಿ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ರಾಜ ಗೋಪಾಲಾಚಾರಿ, ಉಪಾಧ್ಯಕ್ಷ ಶಂಕರಾಚಾರಿ, ಖಜಾಂಚಿ ಶಂಕರಾಚಾರ್, ನಿವೃತ್ತ ಕಂದಾಯಾಧಿಕಾರಿ ಚಂದ್ರಶೇಖರ್ ಹಾಜರಿದ್ದರು
ಜಕಣಾಚಾರಿ ಪ್ರತಿಮೆಗೆ ಸ್ಥಳ ಗುರ್ತಿಸಿವಿಶ್ವಕರ್ಮ ಸಮುದಾಯದ ಹಲವಾರು ವರ್ಷಗಳ ಬೇಡಿಕೆಯಾದ ಅಮರಶಿಲ್ಪಿ ಜಕಣಾಚಾರಿ ಪ್ರತಿಮೆಗೆ ಸ್ಥಾಪನೆಗೆ ಅಗತ್ಯವಾದ ಸ್ಥಳವನ್ನು ಗುರ್ತಿಸಿಕೊಡುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ತ್ವರಿತವಾಗಿ ಪ್ರತಿಮೆ ಸ್ಥಾಪನೆಗೆ ಸೂಕ್ತ ಜಾಗ ಒದಗಿಸಿಕೊಡಬೇಕು ಎಂದು ತಹಸೀಲ್ದಾರ್ ಅವರಿಗೆ ವಿಶ್ವಕರ್ಮ ಸಂಘದ ತಾಲೂಕು ಅಧ್ಯಕ್ಷ ಸುರೇಶ್‌ಗೆ ಮನವಿ ಮಾಡಿದರು.