ವಿಶ್ವಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆ: 15ನೇ ವರ್ಷದ ಮೊಸರು ಕುಡಿಕೆ ಉತ್ಸವ

| Published : Aug 18 2025, 12:01 AM IST

ವಿಶ್ವಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆ: 15ನೇ ವರ್ಷದ ಮೊಸರು ಕುಡಿಕೆ ಉತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ಹಾಗೂ ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ನಡೆಯಿತು.

ಕನ್ನಡಪ್ರಭವಾರ್ತೆ ಪುತ್ತೂರು

ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ಹಾಗೂ ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ನಡೆಯಿತು.ನಗರದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಅಟ್ಟಿ ಮಡಕೆ ಒಡೆಯುವ ಸಾಹಸ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ವಿಶ್ವಹಿಂದು ಪರಿಷತ್ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಬಜರಂಗದಳ ಪುತ್ತೂರು ಜಿಲ್ಲೆ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.ಶೋಭಾಯಾತ್ರೆಯಲ್ಲಿ ಶ್ರೀ ಕೃಷ್ಣನ ರಥ, ಕೊಂಬು ಕಹಳೆ, ಚಂದಳಿಕೆ ವೀರಾಂಜನೇಯ ವ್ಯಾಯಾಮ ಶಾಲೆಯಿಂದ ತಾಲೀಮು ಪ್ರದರ್ಶನ, ಕುಣಿತ ಭಜನಾ ತಂಡಗಳಿಂದ ಕುಣಿತ ಭಜನೆ, ಕೀಲುಕುದುರೆ, ಗೊಂಬೆ, ನಾಸಿಕ್ ಬ್ಯಾಂಡ್, ಶ್ರೀರಾಮ್ ಚೆಂಡೆ ಮತ್ತು ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು. ನಗರದಲ್ಲಿ ಆಯ್ದ ಭಾಗಗಳಲ್ಲಿ ಅಟ್ಟಿ ಮಡಕೆ ಒಡೆಯುವ ಸಾಹಸದ ಪ್ರದರ್ಶನ ನಡೆಸಲಾಯಿತು. ಶೋಭಾಯಾತ್ರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ತಲುಪಿ ಅಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು. ಸಭಾ ಕಾರ್ಯಕ್ರಮದ ಬಳಿಕ ಪುನಃ ಆಯ್ದ ಭಾಗಗಳಲ್ಲಿ ಹಾಕಿದ ಅಟ್ಟಿ ಮಡಕೆ ಒಡೆಯುವ ಸಾಹಸ ಪ್ರದರ್ಶನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಮುರಳೀಕೃಷ್ಣ ಹಸಂತಡ್ಕ, ಡಾ. ಕೃಷ್ಣಪ್ರಸನ್ನ, ದಾಮೋದರ ಪಾಟಾಳಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.