ಸಾರಾಂಶ
ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾಡಳಿತ ವತಿಯಿಂದ ಜ.1ರ ಬೆಳಗ್ಗೆ 11.30ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಮರ ಶಿಲ್ಪಿ ಜಕಣಾಚಾರಿ ಅವರು ಒಬ್ಬರು ಮಹಾನ್ ಶಿಲ್ಪಿ, ಇಂದು ಅವರ ಶಿಲ್ಪಕಲೆಗಳು ಹಲವಾರು ಯುವ ಶಿಲ್ಪಿಗಳಿಗೆ ಸ್ಫೂರ್ತಿ ಆಗಿವೆ. ಅಂತಹವರ ಸಂಸ್ಮರಣಾ ದಿನವನ್ನು ಆಚರಿಸುವುದು, ಅವರ ಸಾಧನೆಗಳನ್ನು ಎಲ್ಲರಿಗೂ ತಿಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕರ್ನಾಟಕ ಕಾವಲುಪಡೆಯ ಅಧ್ಯಕ್ಷ ಮೋಹನ್ ಕುಮಾರ್ ಗೌಡ ಹಾಗೂ ಸಮುದಾಯದ ಮುಖಂಡರು ಇದ್ದರು.