ಸಾರಾಂಶ
ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಾಸಕ ಯಶ್‌ಪಾಲ್ ಎ. ಸುವರ್ಣ ಸಂಸ್ಮರಣೆ ಮಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಅಮರಶಿಲ್ಪಿ ಜಕಣಾಚಾರಿ ಕೈಚಳಕದ ಶಿಲ್ಪ ಕಲಾಕೃತಿಗಳು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.ಅವರು ಸೋಮವಾರ ರಜತಾದ್ರಿಯ ಜಿಪಂ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಶಿಲಾಶಿಲ್ಪಿ ರಾಮಚಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಪ್ರೊ.ಬಿ. ಎ. ಆಚಾರ್ಯ, ಜಿಪಂ ಸಿಇಓ ಪ್ರಸನ್ನ ಎಚ್, ಉಪ ಕಾರ್ಯದರ್ಶಿ ರಾಜು ಮೊಗವೀರ, ವಿಶ್ವಕರ್ಮ ಸಮುದಾಯದ ಪ್ರಮುಖರಾದ ಮಧು ಆಚಾರ್ಯ ಮೂಲ್ಕಿ, ಕೆ. ವೆಂಕಟೇಶ್ ಆಚಾರ್ಯ, ರಮೇಶ್ ಆಚಾರ್ಯ ನೇರಂಬಳ್ಳಿ ಮತ್ತಿತರರು ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಮಹೇಶ್ ಮಲ್ಪೆ ನಿರೂಪಿಸಿದರು. ಹರೀಶ್ ವಂದಿಸಿದರು.