ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ

| Published : Sep 19 2024, 01:51 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯ ಶ್ರಮ ಅಗಾಧವಾಗಿದೆ. ಇಂತಹ ದಾರ್ಶನಿಕರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆಗಳನ್ನು ಯುವಪೀಳಿಗೆ ಅನುಸರಿಸಬೇಕು ಎಂದು ಹೇಳಿದರು.

ಮಹೀಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ಹಾರೋಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ರಾವಸಾಬ ಬಡಿಗೇರ ಅವರು ಉಪನ್ಯಾಸ ನೀಡಿದರು. ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಎಚ್.ಮಮದಾಪೂರ ಅವರು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಗ್ರೇಡ್ ೨ ತಹಸೀಲ್ದಾರ್‌ ಐ.ಎಚ್ ತುಂಬಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ದೇವೆಂದ್ರ ಮಿರೇಕರ್ ಸೇರಿದಂತೆ ಮುಂತಾದವರು ಇದ್ದರು.

ಮೆರವಣಿಗೆಗೆ ಚಾಲನೆ: ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಮಗ ಗೆಣ್ಣೂರು ಚಾಲನೆ ನೀಡಿದರು. ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಹಾಘೂ ಕನಕದಾಸ ವೃತ್ತದಿಂದ ರಂಗಮಂದಿದರಲ್ಲಿ ಸಮಾವೇಶಗೊಂಡಿತು.