ಸಾರಾಂಶ
ಕಲಬುರಗಿ ಗುತ್ತಿಗೆದಾರ ಸಚಿನ್ ಪಂಚಾಳ್ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ನಗರದಲ್ಲಿ ಪ್ರತಿಭಟನೆ ನಡೆಸಿತು.
ಕನ್ನಡಪ್ರಭ ವಾರ್ತೆ ಕೊಪ್ಪಳ
ಕಲಬುರಗಿ ಗುತ್ತಿಗೆದಾರ ಸಚಿನ್ ಪಂಚಾಳ್ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ನಗರದಲ್ಲಿ ಪ್ರತಿಭಟನೆ ನಡೆಸಿತು.ಕಲಬುರಗಿಯ ಗುತ್ತಿಗೆದಾರನ ಸಾವಿನ ಪ್ರಕರಣ ನಿಜಕ್ಕೂ ಸಮಾಜಕ್ಕೆ ನೋವು ತರುವಂತಾಗಿದೆ. ಇಂದು ಯುವಕರು ರಾಜಕಾರಣಕ್ಕೆ ಹಾಗೂ ಉದ್ಯಮಕ್ಕೆ ಬರುವುದು ಕಷ್ಟದ ಕೆಲಸವಾಗುತ್ತಿದೆ. ಸಚಿನ್ ಗುತ್ತಿಗೆದಾರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ರಾಜಕಾರಣದ ಒತ್ತಡ ಸೇರಿದಂತೆ ನಾನಾ ಕಾರಣಗಳಿಂದ ಮಾನಸಿಕ ತೊಂದರೆ ಅನುಭವಿಸಿದ್ದಾರೆ. ಇಂತಹ ವ್ಯವಸ್ಥೆಯಿಂದಾಗಿ ಅವರ ಸಾವು ಸಂಭವಿಸಿದೆ. ಇದರಿಂದ ಮೃತ ಗುತ್ತಿಗೆದಾರನ ಕುಟುಂಬವು ತುಂಬ ದುಃಖದಲ್ಲಿ ಮುಳುಗಿದೆ. ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾನೆ. ಇದನ್ನು ತನಿಖೆ ಮಾಡಬೇಕು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿದರೆ ಎಲ್ಲವೂ ಬೆಳಕಿಗೆ ಬರಲಿದೆ. ಆತನ ಸಾವಿಗೆ ಕಾರಣರಾದ ಎಲ್ಲರನ್ನು ಬಂಧಿಸಬೇಕು. ಕೂಡಲೇ ಸರ್ಕಾರವು ಗುತ್ತಿಗೆದಾರನ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ಕೊಡುವ ಕೆಲಸ ಮಾಡಬೇಕು ಹಾಗೂ ಆ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆದಾರರಿಗೆ ಆಗುತ್ತಿರುವ ಕಿರುಕುಳ ತಡೆಗೆ ದೌರ್ಜನ್ಯ ತಡೆಗೆ ಸರ್ಕಾರವು ಕಾನೂನು ಜಾರಿ ಮಾಡಬೇಕು ಎಂದು ಆಗ್ರಹಿಸಿ ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕ ಸೇರಿ ವಿವಿಧ ಘಟಕಗಳಿಂದ ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿಯ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಡಿಸಿ ಕಚೇರಿ ಮುಂದೆ ಅರ್ಧ ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ನಡೆಸಿ ಎಸಿ ಕ್ಯಾ. ಮಹೇಶ ಮಾಲಗಿತ್ತಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಲೇಬಗೇರಿಯ ನಾಗಮೂರ್ತೇಂದ್ರ ಮಹಾಸ್ವಾಮಿಗಳು, ನಾಗಲಿಂಗ ಮಹಾಸ್ವಾಮಿಗಳು, ಸಿರಸಪ್ಪಯ್ಯ ಸ್ವಾಮಿಗಳು, ಮುದ್ದಾಬಳ್ಳಿಯ ಗುರುನಾಥ ಸ್ವಾಮಿಗಳು, ಗಿಣಗೇರಿಯ ಶ್ರೀಕಂಠ ಸ್ವಾಮಿಗಳ ನೇತೃತ್ವದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ನಾಗೇಶ ಕುಮಾರ ಕಮ್ಸಾಳ, ಜಿಲ್ಲಾ ಗೌರವಾಧ್ಯಕ್ಷ ಈಶಪ್ಪ ಬಡಿಗೇರ, ಜಿಲ್ಲಾ ಕಾರ್ಯಾಧ್ಯಕ್ಷ ರುದ್ರಪ್ಪ ಬಡಿಗೇರ, ವಿವಿಧ ತಾಲೂಕು ಅಧ್ಯಕ್ಷರಾದ ದೇವೇಂದ್ರಪ್ಪ ಬಡಿಗೇರ, ಶಂಕ್ರಪ್ಪ ಬಡಿಗೇರ, ಕಾಳೇಶ ಬಡಿಗೇರ, ದೇವಪ್ಪ ಬಡಿಗೇರ, ಸೂಗೂರೇಶ್ವರ ಅಕ್ಕಸಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ಪ್ರಕಾಶ, ಸಮಾಜದ ಮುಖಂಡರಾದ ಪ್ರಭಾಕರ ಬಡಿಗೇರ, ಕಲ್ಲೇಶ ಬಡಿಗೇರ, ದೇವೇಂದ್ರಪ್ಪ ರಾಜೂರು, ಕೃಷ್ಣಾ ಬಡಿಗೇರ, ಮೌನೇಶ ಮಾದಿನೂರು, ಶರಣಪ್ಪ ಬಡಿಗೇರ, ವೀರಭದ್ರಪ್ಪ ಬಡಿಗೇರ, ಮಂಜುನಾಥ ಬಡಿಗೇರ, ಮೌನೇಶ ಕಿನ್ನಾಳ, ಬ್ರಹ್ಮಾನಂದ ಬಡಿಗೇರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.