ಕುಶಲಕರ್ಮಿಗಳ ಸಬಲೀಕರಣಕ್ಕಾಗಿ ವಿಶ್ವಕರ್ಮ ಯೋಜನೆ ಸಹಕಾರಿ: ಸಂತೋಷ

| Published : May 11 2025, 01:19 AM IST

ಸಾರಾಂಶ

ಚಿಕ್ಕಮಗಳೂರು, ಸಾಂಪ್ರದಾಯಿಕ ಕರಕುಶಲ ವಸ್ತುಗಳ ನಿರ್ಮಾಣದಲ್ಲಿ ತೊಡಗಿರುವವರನ್ನು ಬೆಂಬಲಿಸುವುದು ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದ್ದು ಸ್ಥಳೀಯ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯಗಳನ್ನು ಜೀವಂತ ವಾಗಿಸುತ್ತದೆ ಎಂದು ಪಿಎಂ ವಿಶ್ವಕರ್ಮ ಯೋಜನಾ ಸಮಿತಿ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್ ಹೇಳಿದರು.

ನಗರದ ಪಿಎಂ ವಿಶ್ವಕರ್ಮ ಯೋಜನಾ ತರಬೇತಿ ಕೇಂದ್ರದಲ್ಲಿ ನಡೆದ ವಿಶ್ವಕರ್ಮ ಯೋಜನೆ ತರಬೇತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಾಂಪ್ರದಾಯಿಕ ಕರಕುಶಲ ವಸ್ತುಗಳ ನಿರ್ಮಾಣದಲ್ಲಿ ತೊಡಗಿರುವವರನ್ನು ಬೆಂಬಲಿಸುವುದು ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದ್ದು ಸ್ಥಳೀಯ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯಗಳನ್ನು ಜೀವಂತ ವಾಗಿಸುತ್ತದೆ ಎಂದು ಪಿಎಂ ವಿಶ್ವಕರ್ಮ ಯೋಜನಾ ಸಮಿತಿ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್ ಹೇಳಿದರು.

ನಗರದ ಪಿಎಂ ವಿಶ್ವಕರ್ಮ ಯೋಜನಾ ತರಬೇತಿ ಕೇಂದ್ರದಲ್ಲಿ ನಡೆದ ವಿಶ್ವಕರ್ಮ ಯೋಜನೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಭಾರತದ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಮರು ರೂಪಿಸುವ ಮತ್ತು ಅದರ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಒಂದು ಪ್ರಮುಖ ಉಪ ಕ್ರಮ ವಾಗಿದೆ. ಇದು ಕರಕುಶಲ ಉದ್ಯಮ ಮರುರೂಪಿಸಲು ಕೌಶಲ್ಯವರ್ಧನೆ ಮತ್ತು ಆಧುನಿಕ ತಂತ್ರಜ್ಞಾನವನ್ನು ನೀಡುತ್ತದೆ ಎಂದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯವು ನಿರ್ವಹಿಸುತ್ತಿರುವ ವಿಶ್ವಕರ್ಮ ಯೋಜನೆಯು ಕಾರ್ಮಿಕರ ಕೌಶಲ್ಯಗಳನ್ನು ಹೆಚ್ಚಿಸುವ ಮೂಲಕ ಹಾಗೂ ಅವರ ಉತ್ಪನ್ನಗಳ ಗುಣಮಟ್ಟವನ್ನು ಸುಧಾರಿಸಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.ಬಡಗಿ, ಕಮ್ಮಾರ, ಶಿಲ್ಪಿಗಳು, ಕುಶಲಕರ್ಮಿಗಳು ಸೇರಿದಂತೆ 18 ಬಗೆಯ ಸಾಂಪ್ರದಾಯಿಕ ವೃತ್ತಿಯನ್ನು ವಿಶ್ವಕರ್ಮ ಯೋಜನೆ ಯಲ್ಲಿ ಒಳಗೊಂಡಿರುವವರಿಗೆ ವಿವಿಧ ಪ್ರಯೋಜವಿದ್ದು ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಆರ್ಥಿಕ ಬೆಂಬಲದ ಉದ್ದೇಶದಿಂದ ರೂಪಿಸಲಾದ ಮಹತ್ವದ ಯೋಜನೆ ಇದಾಗಿದೆ ಎಂದರು.ದೇಶಾದ್ಯಂತ ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ಮಾರುಕಟ್ಟೆ, ಬ್ರ್ಯಾಂಡಿಂಗ್, ಪ್ಯಾಕೇಜಿಂಗ್ ಇತ್ಯಾದಿಗಳಿಗೆ ಬೆಂಬಲ ನೀಡಲಾಗುತ್ತಿದೆ. ಪಿಎಂ ವಿಶ್ವಕರ್ಮ ಫಲಾನುಭವಿಗಳು ವಿವಿಧ ವ್ಯಾಪಾರ ಮೇಳಗಳು, ರಾಜ್ಯ ಮಟ್ಟದ ಪ್ರದರ್ಶನಗಳ ಮೂಲಕ ತಮ್ಮ ಕರಕುಶಲ ವಸ್ತುಗಳು, ಉತ್ಪನ್ನಗಳ ನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಅನುಕೂಲ ಮಾಡಿಕೊಡ ಲಾಗಿದೆ ಎಂದು ಹೇಳಿದರು.ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತಮ್ಮ ಉತ್ಪನ್ನಗಳ ಮಾರಾಟ ಉತ್ತೇಜಿಸಲು ವಿವಿಧ ಇ-ಕಾಮರ್ಸ್ ವೇದಿಕೆಗಳ ಮೂಲಕ ಪಿಎಂ ವಿಶ್ವಕರ್ಮ ಫಲಾನುಭವಿಗಳಿಗೆ ಆನ್ ಲೈನ್ ಮಾರ್ಕೆಟಿಂಗ್ ಬೆಂಬಲ ಒದಗಿಸಲಾಗಿದೆ. ಕ್ಷೇತ್ರದ ಸಂಸದರ ಸಹಕಾರದಿಂದ ಜಿಲ್ಲೆಯಲ್ಲಿ ಇದು ಮೊದಲನೇ ಹಂತದಲ್ಲಿ 4,217 ಫಲಾನುಭವಿಗಳು ಆಯ್ಕೆಯಾಗಿದ್ದು ಈ ಪೈಕಿ 1810 ಫಲಾನುಭವಿಗಳಿಗೆ ಸಾಲ ವಿತರಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಜಿಲ್ಲಾ ಸಂಚಾಲಕ ರಾಕೇಶ್, ತರಬೇತಿ ಕೇಂದ್ರದ ಸಂಯೋಜಕಿ ಸಂಧ್ಯಾ ಆಚಾರ್ಯ ಉಪಸ್ಥಿತರಿದ್ದರು.10 ಕೆಸಿಕೆಎಂ 4ಚಿಕ್ಕಮಗಳೂರಿನ ಪಿಎಂ ವಿಶ್ವಕರ್ಮ ಯೋಜನಾ ತರಬೇತಿ ಕೇಂದ್ರದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂತೋಷ್‌ ಕೋಟ್ಯಾನ್‌ ಮಾತನಾಡಿದರು. ರಾಕೇಶ್‌, ಸಂಧ್ಯಾ ಆಚಾರ್ಯ ಇದ್ದರು.