ಸಾರಾಂಶ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ವಿಶ್ವಕರ್ಮರು ಶ್ರಮಜೀವಿಗಳು, ತಮ್ಮ ಕರ್ಮದಿಂದಲೇ ಗುರುತಿಸಿಕೊಂಡವರು. ಪ್ರತಿಯೊಂದು ಶುಭ ಕಾರ್ಯವೂ ವಿಶ್ವಕರ್ಮರ ಸಹಕಾರವಿಲ್ಲದೆ ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉಪನ್ಯಾಸ ನೀಡಿದ ಶಿಕ್ಷಕ ವೆಂಕಟರಮಣ ಪಾಂಡುರಂಗ ಆಚಾರ್ಯ, ಅದೆಷ್ಟೋ ದೇಶಗಳು ತಮ್ಮ ಕೌಶಲ್ಯಗಳಿಂದ ಅಭಿವೃದ್ಧಿಯತ್ತ ಸಾಗುತ್ತಿವೆ. ಭಾರತದಲ್ಲಿ ಹಲವಾರು ಕೌಶಲ್ಯಗಳನ್ನು ಹೊಂದಿರುವ ವಿಶ್ವಕರ್ಮರು ಇದ್ದಾರೆ. ಅವರನ್ನು ಕಡೆಗಣಿಸಿದರ, ಅವರ ಕೌಶಲ್ಯಗಳಿಗೆ ಮಾನ್ಯತೆ ನೀಡದೆ ಇದ್ದರೆ ನಾಶಕ್ಕೆ ಕಾರಣವಾಗಬಹುದು ಎಂದರು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿದರು. ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮತ್ತಿತರರು ಇದ್ದರು.