ಸಮಾಜಕ್ಕೆ ವಿಶ್ವಕರ್ಮರ ಪಾತ್ರ ಅನನ್ಯ

| Published : Sep 18 2025, 01:10 AM IST

ಸಾರಾಂಶ

ಜಗತ್ತಿಗೆ ಎಲ್ಲವನ್ನೂ ನೀಡಿದ ವಿಶ್ವಕರ್ಮರ ಕೊಡುಗೆ ಅಪಾರ. ವಿಶ್ವಕರ್ಮರು ಕುಲಕಸುಬು ಮಾಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು. ಅಜಂತಾ, ಎಲ್ಲೋರ ದೇವಾಲಯಗಳು, ಬೇಲೂರು ಹಳೇಬೀಡು ಶಿಲ್ಪ ಕಲೆಗಳು ವಿಶ್ವ ಪ್ರಸಿದ್ಧಿ ಪಡೆದಿವೆ. ಇದಕ್ಕೆ ಅಲ್ಲಿನ ಕೆತ್ತನೆ ಹಾಗೂ ಶಿಲ್ಪ ಕಲೆಗಳೇ ಸಾಕ್ಷಿ. ಆ ನಿಟ್ಟಿನಲ್ಲಿ ವಿಶ್ವಕರ್ಮರ ಕ್ರಿಯಾಶೀಲತೆಯನ್ನು ಕಾಣಬಹುದಾಗಿದೆ. ವಿಶ್ವಕರ್ಮರ ಕೆಲಸವು ಸ್ಥಳೀಯ ಉತ್ಪನ್ನಗಳನ್ನು, ಸಂಸ್ಕೃತಿಯನ್ನು ಮತ್ತು ಪರಂಪರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಕರಕುಶಲಕರ್ಮಿಗಳ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ಅವರನ್ನು ಬೆಂಬಲಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ’ಪಿಎಂ ವಿಶ್ವಕರ್ಮ ಯೋಜನೆ’ಯನ್ನು ಪ್ರಾರಂಭಿಸಿದೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ವಿಶ್ವಕರ್ಮ ಸಮುದಾಯದವರು ಶ್ರಮ ಜೀವಿಗಳಾಗಿದ್ದು, ಸಮಾಜಕ್ಕೆ ಅವರ ಕೊಡುಗೆ ಅನನ್ಯವಾದುದು ಎಂದು ಶಾಸಕರಾದ ಸಿಮೆಂಟ್‌ ಮಂಜು ಹೇಳಿದರು.

ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಸಮಾಜಕ್ಕೆ ತನ್ನದೇ ಆದ ಚಾರಿತ್ರಿಕ ಹಿನ್ನೆಲೆ ಇದೆ. ವೇದಗಳ ಕಾಲದಿಂದಲೂ ಸಮಾಜಕ್ಕೆ ಇವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ. ಅನೇಕತೆಯಲ್ಲಿ ಏಕತೆ ಹೊಂದಿರುವುದೇ ನಮ್ಮ ವೈಶಿಷ್ಟ್ಯವಾಗಿದೆ. ಸಮಾಜದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ಅನಿವಾರ್ಯ. ಆ ನಿಟ್ಟಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ನಿಗಮದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಜಗತ್ತಿಗೆ ಎಲ್ಲವನ್ನೂ ನೀಡಿದ ವಿಶ್ವಕರ್ಮರ ಕೊಡುಗೆ ಅಪಾರ. ವಿಶ್ವಕರ್ಮರು ಕುಲಕಸುಬು ಮಾಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು. ಅಜಂತಾ, ಎಲ್ಲೋರ ದೇವಾಲಯಗಳು, ಬೇಲೂರು ಹಳೇಬೀಡು ಶಿಲ್ಪ ಕಲೆಗಳು ವಿಶ್ವ ಪ್ರಸಿದ್ಧಿ ಪಡೆದಿವೆ. ಇದಕ್ಕೆ ಅಲ್ಲಿನ ಕೆತ್ತನೆ ಹಾಗೂ ಶಿಲ್ಪ ಕಲೆಗಳೇ ಸಾಕ್ಷಿ. ಆ ನಿಟ್ಟಿನಲ್ಲಿ ವಿಶ್ವಕರ್ಮರ ಕ್ರಿಯಾಶೀಲತೆಯನ್ನು ಕಾಣಬಹುದಾಗಿದೆ. ವಿಶ್ವಕರ್ಮರ ಕೆಲಸವು ಸ್ಥಳೀಯ ಉತ್ಪನ್ನಗಳನ್ನು, ಸಂಸ್ಕೃತಿಯನ್ನು ಮತ್ತು ಪರಂಪರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಕರಕುಶಲಕರ್ಮಿಗಳ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ಅವರನ್ನು ಬೆಂಬಲಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ’ಪಿಎಂ ವಿಶ್ವಕರ್ಮ ಯೋಜನೆ’ಯನ್ನು ಪ್ರಾರಂಭಿಸಿದೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ವಿಶ್ವಕರ್ಮ ಸಮುದಾಯದ ಸುಮಾರು ೫ ಸಾವಿರಕ್ಕಿಂತ ಹೆಚ್ಚು ಜನರಿದ್ದೇವೆ. ಕಳೆದ ೩೦ ವರ್ಷಗಳಿಂದ ಹಲವಾರು ಸರ್ಕಾರಗಳಿಗೆ ಜನಪ್ರತಿನಿಧಿಗಳಿಗೆ ವಿಶ್ವಕರ್ಮ ಭವನ ನಿರ್ಮಿಸುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಬೇಸರ ಹೊರಹಾಕಿದರು. ಹೀಗಿರುವ ಶಾಸಕರು ವಿಶ್ವಕರ್ಮ ಭವನ ನಿರ್ಮಾಣಕ್ಕೆ ಮುಂದಾಗುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷೆ ಜ್ಯೋತಿ ರಾಜ್‌ಕುಮಾರ್, ಉಪ ತಹಸೀಲ್ದಾರ್‌ ಮೋಹನ್ ಕುಮಾರ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರೀಶ, ವಿಶ್ವಕರ್ಮ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಕಮಲ ಸಂಪತ್ ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶಾರದ ಗುರುಮೂರ್ತಿ, ನಿವೃತ್ತ ತಹಸೀಲ್ದಾರ್‌ ಅಣ್ಣೇಗೌಡ, ಭಾಷಣಕಾರರಾದ ಸಿದ್ದೇಶ, ಸಮುದಾಯದ ಮುಖಂಡರಾದ ರೇಣುಕ ಪ್ರಸಾದ್, ತಾಲೂಕು ಚುನಾವಣಾ ಶಿರಸ್ತೆದಾರ್ ಶ್ವೇತಾ, ಜಾನೇಕೆರೆ ಪರಮೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.