ಸಾರಾಂಶ
Vishwanath S. Thangadgi appointed as District Working President
ಯಾದಗಿರಿ: ನಮ್ಮ ಕರುನಾಡ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ಅವರನ್ನು ನೇಮಕ ಮಾಡಲಾಗಿದೆ. ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ರವಿ ಕೆ. ಮುದ್ನಾಳ ನೇಮಕಾತಿ ಆದೇಶ ನೀಡಿ ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗೆ ಕಂಕಣಬದ್ಧವಾಗಿ ದುಡಿಯಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗುರುಮಠಕಲ್ ತಾಲೂಕು ಅಧ್ಯಕ್ಷ ಅಶೋಕರಡ್ಡಿ ಸಂಬ್ರ, ಬಸವರಾಜ ಗುತ್ತೇದಾರ ಸೇರಿದಂತೆ ಇನ್ನಿತರರು ಇದ್ದರು.
20ವೈಡಿಆರ್6 : ನಮ್ಮ ಕರುನಾಡ ರಕ್ಷಣಾ ವೇದಿಕೆ ಯಾದಗಿರಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ಇವರನ್ನು ನೇಮಕ ಮಾಡಲಾಗಿದೆ.