ದೂರದೃಷ್ಟಿ, ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ

| Published : Feb 17 2024, 01:15 AM IST

ದೂರದೃಷ್ಟಿ, ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ ₹52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ.

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 15ನೇ ಆಯ-ವ್ಯಯ ಐತಿಹಾಸಿಕ ಬಜೆಟ್ ಆಗಿದೆ. ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಸಚಿವ ಶಿವರಾಜ್ ತಂಗಡಗಿ ಸ್ವಾಗತಿಸಿದರು.ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದೆ. ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿ ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ ₹52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜನೆ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ.ಅಲೆಮಾರಿ, ಅರೆಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ ರಚನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್ಎಟಿ, ಎಂಎಟಿ ಮತ್ತು ಚಾರ್ಟೆಡ್‌ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡುವ ಯೋಜನೆ ಉಪಯುಕ್ತವಾಗಿದೆ ಎಂದಿದ್ದಾರೆ.ಪೌರಾಣಿಕ ಹಾಗೂ ಐತಿಹಾಸಿಕ ಪ್ರಖ್ಯಾತಿ ಹೊಂದಿರುವ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು ₹100 ಕೋಟಿ ಮೀಸಲಿಟ್ಟಿರುವುದು ಉತ್ತಮ ಬೆಳವಣಿಗೆ. ಈ ಹಿಂದಿನ ಸರ್ಕಾರ ಕೇವಲ ಸುಳ್ಳು ಹೇಳಿ ಅಂಜನಾದ್ರಿ ಅಭಿವೃದ್ಧಿಗೆ ನೂರು ಕೋಟಿ ಇಟ್ಟಿದ್ದಾಗಿ ಸುಳ್ಳು ಹೇಳಿತ್ತು. ಆಂಜನೇಯ ನಾಡಿನಲ್ಲಿ ಅಭಿವೃದ್ಧಿ ಮಾಡಿ ತೋರಿಸುತ್ತೇವೆ ಎಂದಿದ್ದಾರೆ.ಹಲವು ವರ್ಷಗಳ ಬೇಡಿಕೆಯಾಗಿರುವ ಜಿಲ್ಲೆಯ ನವಲಿ ಬಳಿ‌ ₹15,600 ಕೋಟಿ ವೆಚ್ಚದಲ್ಲಿ ಸಮತೋಲನ ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವುದು ಜಿಲ್ಲೆಗೆ ನೀಡಿರುವ ಆದ್ಯತೆ ಆಗಿದೆ ಎಂದಿದ್ದಾರೆ.