ಸಾರಾಂಶ
ಸಿಡಿ ಹಬ್ಬದ ಅಂಗವಾಗಿ ತುರ್ತು ನಿಮಿತ್ತ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಪುರಸಭೆ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರು ಹಬ್ಬದ ಯಶಸ್ಸಿಗೆ ಕೈ ಜೋಡಿಸಬೇಕೆಂದು ಕೋರಿದರು.
ಮಳವಳ್ಳಿ: ಐತಿಹಾಸಿಕ ದಂಡಿನಮಾರಮ್ಮ ಹಾಗೂ ಪಟ್ಟಲದಮ್ಮ ಸಿಡಿ ಹಬ್ಬ ಸಮೀಪಿಸುತ್ತಿರುವುದರಿಂದ ಪುರಸಭೆ ಅಧಿಕಾರಿಗಳು ಪ್ರತಿಯೊಂದು ವಾರ್ಡ್ ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡುವ ಮೂಲಕ ಮೂಲ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಿಡಿಹಬ್ಬದ ಅಂಗವಾಗಿ ನಡೆದ ಅಧಿಕಾರಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ವಿದ್ಯುತ್ ದೀಪ ಸೇರಿದಂತೆ ಹಬ್ಬಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಗುತ್ತಿಗೆದಾರರು ಬಾಕಿ ಉಳಿದಿರುವ ಕಾಮಗಾರಿಗಳನ್ನು ಅಂತಿಮಗೊಳಿಸಬೇಕು ಎಂದು ಸಲಹೆ ನೀಡಿದರು.ಸಿಡಿ ಹಬ್ಬದ ಅಂಗವಾಗಿ ತುರ್ತು ನಿಮಿತ್ತ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಪುರಸಭೆ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರು ಹಬ್ಬದ ಯಶಸ್ಸಿಗೆ ಕೈ ಜೋಡಿಸಬೇಕೆಂದು ಕೋರಿದರು.
ಇದೇ ವೇಳೆ ಅಧಿಕಾರಿಗಳು ಮತ್ತು ಮುಖಂಡರು ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಶಾಸಕರು ತಕ್ಷಣದಲ್ಲಿಯೇ ಸಮಸ್ಯೆಗಳ ಪರಿಹಾರಕ್ಕೆ ಹಲವು ಸಲಹೆ- ಸೂಚನೆಗಳನ್ನು ನೀಡಿದರು.ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಎಂ.ಸಿ ನಾಗರತ್ನ, ಅಧಿಕಾರಿಗಳಾದ ನವೀನಕುಮಾರಿ, ಲೋಕೋಪಯೋಗಿ ಎಇ ಸೋಮಶೇಖರ್ ಸೇರಿ ಮುಖಂಡರು ಇದ್ದರು.