ಹಾಸ್ಟೆಲ್‌, ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತರ ಭೇಟಿ, ಪರಿಶೀಲನೆ

| Published : Dec 02 2024, 01:19 AM IST

ಹಾಸ್ಟೆಲ್‌, ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತರ ಭೇಟಿ, ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ವೆನ್ಲಾಕ್‌ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ಸಿಬ್ಬಂದಿ ಮಾತ್ರವಲ್ಲದೆ, ರೋಗಿಗಳಿಂದಲೂ ಸೂಕ್ತ ಮಾಹಿತಿ ಪಡೆದು ಹಲವು ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭಾನುವಾರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿಗೆ ಭೇಟಿ ನೀಡಿದ ಅವರು, ಘಟಕದ ಒಳಪ್ರದೇಶಗಳಿಗೂ ಭೇಟಿ ನೀಡಿ ಸಮಗ್ರ ತಪಾಸಣೆ ನಡೆಸಿದರು. ಹಾಸ್ಟೆಲ್‌ಗಳಿಗೆ ಭೇಟಿ: ಬಳಿಕ ನಗರದ ಕೊಡಿಯಾಲ್ ಬೈಲ್‌ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಿಗೆ ಭೇಟಿ ನೀಡಿದರು. ಹಾಸ್ಟೆಲ್ ಅಡುಗೆ ಕೋಣೆ, ದಾಸ್ತಾನು ಕೊಠಡಿಗಳನ್ನು ಪರಿಶೀಲಿಸಿ, ಆಹಾರ ಸಾಮಗ್ರಿಗಳ ತಪಾಸಣೆ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಅಹವಾಲನ್ನು ಆಲಿಸಿ, ಸಂವಾದ ನಡೆಸಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಪ್ರತ್ಯೇಕ ಸ್ಟಡಿ ರೂಂ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಂಜೆ ನಗರದ ವೆನ್ಲಾಕ್‌ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ಸಿಬ್ಬಂದಿ ಮಾತ್ರವಲ್ಲದೆ, ರೋಗಿಗಳಿಂದಲೂ ಸೂಕ್ತ ಮಾಹಿತಿ ಪಡೆದು ಹಲವು ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚನೆ ನೀಡಿದರು.

ಉಪಲೋಕಾಯುಕ್ತರ ಭೇಟಿ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ, ಮಹಾನಗರ ಪಾಲಿಕೆ ಆಯುಕ್ತ ಆನಂದ್, ತಹಸೀಲ್ದಾರ್ ಪ್ರಶಾಂತ್ ಮತ್ತಿತರರು ಇದ್ದರು.