ಸಾರಾಂಶ
ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ಪ್ರಯುಕ್ತ 125 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ, ಶ್ರೀ ಪುರಂದರ ಜಯಂತಿ- ಆರಾಧನೆಯ ಪರ್ವಕಾಲದಲ್ಲಿ ಬುಧವಾರ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರು ದೇವಳಕ್ಕೆ ಭೇಟಿ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ಪ್ರಯುಕ್ತ 125 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ, ಶ್ರೀ ಪುರಂದರ ಜಯಂತಿ- ಆರಾಧನೆಯ ಪರ್ವಕಾಲದಲ್ಲಿ ಬುಧವಾರ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರು ದೇವಳಕ್ಕೆ ಭೇಟಿ ನೀಡಿದರು.ಈ ಸಂದರ್ಭ ಶ್ರೀಗಳು ದೇವಳದ ಗೌಡ ಸಾರಸ್ವತ ಬ್ರಾಹ್ಮಣ ಯುವಕ ಮಂಡಳಿ ವತಿಯಿಂದ ನಿರ್ಮಿಸಲಾದ ‘ಬೆಳ್ಳಿಯ ಶೇಷ ವಾಹನ’ವನ್ನು ದೇವರಿಗೆ ಸಮರ್ಪಣೆ ಮಾಡಿ ಶುಭ ಹಾರೈಸಿದರು.ಈ ಸಮಾರಂಭದಲ್ಲಿ ವೇದಮೂರ್ತಿ ಶ್ರೀಕಾಂತ್ ಭಟ್, ದೇವಳದ ಪ್ರಧಾನ ಅರ್ಚಕ ದಯಾಘನ್ ಭಟ್, ದೇವಳದ ಮೊಕ್ತೇಸರ ಪಿ.ವಿ. ಶೆಣೈ, ವಿಶ್ವನಾಥ್ ಭಟ್, ವಸಂತ್ ಕಿಣಿ, ಚೇ೦ಪಿ ರಾಮಚಂದ್ರ ಭಟ್, ದೀಪಕ್ ಭಟ್, ಗಿರೀಶ್ ಭಟ್, ದೇವಳದ ಆಡಳಿತ ಮಂಡಳಿಯ ಸದಸ್ಯರು, ವಿವಿಧ ಭಜನಾ ಮಂಡಳಿಯ ಸದಸ್ಯರು, ಜಿಎಸ್‌ಬಿ ಮಹಿಳಾ ಮಂಡಳಿ ಸದಸ್ಯರು, ಯುವಕ ಮಂಡಳಿ ಸದಸ್ಯರು, ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.