ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗೂ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದ್ದಾರೆ.

ಸಿರಿಗೆರೆ ಶಿವಮೂರ್ತಿ ಶ್ರೀ ಸಲಹೆ । ಕಾರ್ಖಾನೆ ಅಧಿಕಾರಿಗಳ ಜತೆ ಚರ್ಚೆ । ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚೆ ಭರವಸೆ ಕನ್ನಡಪ್ರಭ ವಾರ್ತೆ ಭದ್ರಾವತಿ

ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗೂ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು.

ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ ರಿಂದ ಫೆ.೧ರವರೆಗೆ ಆಯೋಜಿಸಲಾಗಿದ್ದ ಶ್ರೀ ಮಠದ ಭಾವೈಕ್ಯತಾ ಹಬ್ಬವಾದ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಆಗಮಿಸಿದ್ದ ಶ್ರೀಗಳು ಬಾಳೆಮಾರನಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಲು ಸಾಧ್ಯವಿರುವ ರೂಪುರೇಷೆಗಳ ಕುರಿತ ಯೋಜನಾ ವರದಿಯ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಈ ಸಂಬಂಧ ಚರ್ಚಿಸುವುದಾಗಿ ಭರವಸೆ ನೀಡಿದರು.

ಗುತ್ತಿಗೆ ಕಾರ್ಮಿಕರು ಯಾವುದೇ ರೀತಿ ಆತಂಕಕ್ಕೆ ಒಳಗಾಗಬಾರದು. ಈಗಾಗಲೇ ಹುಣ್ಣಿಮೆ ಮಹೋತ್ಸವಕ್ಕೆ ಆಗಮಿಸಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಉತ್ತಮ ಭವಿಷ್ಯವಿದೆ ಎಂದರು.

ಹುಣ್ಣಿಮೆ ಮಹೋತ್ಸವದ ಜಾಗ ರಕ್ಷಿಸಿ:

ತರಳಬಾಳು ಹುಣ್ಣಿಮೆ ಮಹೋತ್ಸವ ಜರುಗಿದ ವಿಐಎಸ್‌ಎಲ್ ಹೆಲಿಪ್ಯಾಡ್ ಮತ್ತು ಸುತ್ತಮುತ್ತಲಿನ ಜಾಗವನ್ನು ಮೊದಲು ರಕ್ಸಿಸಿಕೊಳ್ಳಿ. ಯಾರು ಸಹ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರವಹಿಸಿ. ಈ ಜಾಗ ಇತಿಹಾಸದ ಪುಟಗಳಲ್ಲಿ ಉಳಿಯುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸಿ ಎಂದು ಭಕ್ತರಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್, ಮುಖ್ಯ ಮಹಾಪ್ರಬಂಧಕ ವಿಶ್ವನಾಥ್, ಪ್ರಮುಖರಾದ ತೀರ್ಥಯ್ಯ, ಮಂಗೋಟೆ ರುದ್ರೇಶ್, ಸಂಜೀವ ಕುಮಾರ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ ಸುರೇಶ್, ಪದಾಧಿಕಾರಿಗಳಾದ ಮಂಜುನಾಥ್, ಶ್ರೀನಿವಾಸ್, ರಾಕೇಶ್, ಕೇಶವಮೂರ್ತಿ, ನವೀನ್, ಬಾಬು, ಅಕ್ಷಯ್ ಸೇರಿದಂತೆ ಇತರರು ಹಾಜರಿದ್ದರು. ಡಿ೪-ಬಿಡಿವಿಟಿ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿ ಸಂಬಂಧ ಸಿರಿಗೆರೆ ತರಳಬಾಳು ಶ್ರೀ ಕಾರ್ಖಾನೆಯ ಅಧಿಕಾರಿಗಳು, ಗುತ್ತಿಗೆ ಕಾರ್ಮಿಕರ ಸಂಘದೊಂದಿಗೆ ಬುಧವಾರ ಚರ್ಚೆ ನಡೆಸಿದರು.