ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಅರ್ಥಶಾಸ್ತ್ರದಲ್ಲಿರುವ ವಿಷಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾವು ಯಾವ ವಸ್ತುಗಳನ್ನು ಯಾವ ಸಂದರ್ಭದಲ್ಲಿ ಖರೀದಿಸಬೇಕು ಹಾಗೂ ಯಾವ ಸಮಯದಲ್ಲಿ ಬೆಲೆ ಏರಿಕೆ ಹಾಗೂ ಇಳಿಕೆ ಉಂಟಾಗುತ್ತದೆ ಎಂಬುವುದನ್ನು ನಾವು ಅರ್ಥಶಾಸ್ತ್ರದಲ್ಲಿ ಅರಿತುಕೊಳ್ಳಬಹುದು ಎಂದು ಅರ್ಥಶಾಸ್ತ್ರಜ್ಞ ಡಾ.ವಿಘ್ನೇಶ್ವರ ವರ್ಮುಡಿ ಹೇಳಿದರು.ಅವರು ವಿವೇಕಾನಂದ ಮಹಾವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಆಯೋಜಿಸಲಾದ ಅರ್ಥಶಾಸ್ತ್ರ ಸಲಹಾ ಕೇಂದ್ರ ಮತ್ತು ಅರ್ಥಶಾಸ್ತ್ರ ಸಂಘದ ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದರು.ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ನಿರ್ದೇಶಕ ಅಚ್ಯುತ ನಾಯಕ್ ಅಧ್ಯಕ್ಷತೆ ವಹಿಸಿ, ಪ್ರಶ್ನಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿರಬೇಕು. ಸಮಾಜಕ್ಕೋಸ್ಕರ, ದೇಶಕ್ಕೋಸ್ಕರ ಏನನ್ನಾದರೂ ಕೊಡುಗೆ ನೀಡಬೇಕು ಎಂಬ ಇಚ್ಛೆಯಿದ್ದರೆ ನಮ್ಮನ್ನು ನಾವು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು. ನಾವು ನಮ್ಮ ಮುಂದಿನ ಪೀಳಿಗೆಗೆ ಮಾದರಿ ವ್ಯಕ್ತಿಗಳಾಗಬೇಕು ಎಂದರು. ಈ ಸಂದರ್ಭ ಡಾ.ವಿಘ್ನೇಶ್ವರ ವರ್ಮುಡಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯಕ್, ಉಪಪ್ರಾಂಶುಪಾಲ ಪ್ರೊ. ಗಣರಾಜ ಭಟ್, ಅರ್ಥಶಾಸ್ತ್ರ ಸಂಘದ ಅಧ್ಯಕ್ಷೆ ವಿದ್ಯಾರ್ಥಿನಿ ಅಕ್ಷತಾ, ಕಾರ್ಯದರ್ಶಿ ಮಧು ಕೆ.ಆರ್. ಹಾಗೂ ಜೊತೆ ಕಾರ್ಯದರ್ಶಿ ಪವಿತ್ರಾ ಉಪಸ್ಥಿತರಿದ್ದರು.ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಸ್ವಾಗತಿಸಿದರು. ಉಪನ್ಯಾಸಕ ಗೋವಿಂದ ಶರ್ಮ ವಂದಿಸಿದರು. ಚೈತನ್ಯ ಚಂದಪ್ಪ ನಿರೂಪಿಸಿದರು.
;Resize=(128,128))
;Resize=(128,128))
;Resize=(128,128))