ಏಳಿ, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂಬ ಸಂದೇಶವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಗುರು ಅಮರಯ್ಯ ಜಾಲಿಬೆಂಚಿ ಹೇಳಿದರು.

ಹುಣಸಗಿ: ಏಳಿ, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂಬ ಸಂದೇಶವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಗುರು ಅಮರಯ್ಯ ಜಾಲಿಬೆಂಚಿ ಹೇಳಿದರು.

ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದ ಖಾಸ್ಗತೇಶ್ವರ ಹಿ.ಪ್ರಾ.ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ, ಆತ್ಮವಿಶ್ವಾಸ ಮತ್ತು ಸೇವಾಭಾವದಿಂದ ಮಾತ್ರ ಶ್ರೇಷ್ಠ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಂತನೆ, ಸಂಸ್ಕಾರ ಹಾಗೂ ಆತ್ಮಗೌರವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿತು. ಜಯಂತಿ ಆಚರಣೆ ವಿದ್ಯಾರ್ಥಿಗಳಿಗೆ ಪ್ರೇರಣೆಯ ದಾರಿದೀಪವಾಗಿ ಪರಿಣಮಿಸುತ್ತದೆ ಎಂದು ಹೇಳಿದರು.

ಶಿಕ್ಷಕರಾದ ಶಹನಾಜ್ ಬೇಗಂ, ಈರಮ್ಮ ಹಿರೇಮಠ್, ಶಿವಲೀಲಾ ಪತ್ತಾರ್ ಹಾಗೂ ಪಾರ್ವತಿ ಬಿರಾದಾರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರರು.

ಸ್ವಾಮಿ ವಿವೇಕಾನಂದರ ಜೀವನ, ಸಾಧನೆಗಳು, ಶಿಕಾಗೋ ಧರ್ಮಸಂಸತ್ತಿನ ಭಾಷಣ, ಯುವಜನತೆಗೆ ನೀಡಿದ ಸಂದೇಶಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಛದ್ಮವೇಷ ಧರಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದರು.