ಸಾರಾಂಶ
ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ವೆಬ್‌ಸೈಟ್‌ನ ಲೋಕಾರ್ಪಣೆ ಮಾಡಲಾಗುವುದು. ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿ, ಸಮಾಜಮುಖಿ ಹಾಗೂ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ತಯಾರಿಸಿರುವ ೧೦ ಪ್ರಾಜೆಕ್ಟ್‌ಗಳ ಅನಾವರಣ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ‘ಪ್ರಜ್ಞೆಯೊಂದಿಗೆ ಪ್ರಗತಿ, ವಿಕಸಿತ ಭಾರತಕ್ಕಾಗಿ’ ಎಂಬ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ ಕಾರ್ಯಕ್ರಮ ಜ.೧೩ರಂದು ಬೆಳಗ್ಗೆ ೯.೩೦ಕ್ಕೆ ನೆಹರೂನಗರದ ವಿವೇಕಾನಂದ ಆವರಣದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದರು. ಪುತ್ತೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ವಂದೇ ಮಾತರಂ ಪಾಠ ಶಾಲೆಯ ಸ್ಥಾಪಕರಾದ ಸಂಶೋಧಕ ಡಾ.ಜಿ.ಬಿ. ಹರೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ವೆಬ್‌ಸೈಟ್‌ನ ಲೋಕಾರ್ಪಣೆ ಮಾಡಲಾಗುವುದು. ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿ, ಸಮಾಜಮುಖಿ ಹಾಗೂ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ತಯಾರಿಸಿರುವ ೧೦ ಪ್ರಾಜೆಕ್ಟ್‌ಗಳ ಅನಾವರಣ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳ ವಿದ್ಯಾರ್ಥಿಗಳು, ಪೋಷಕರು, ಆಡಳಿತ ಮಂಡಳಿಯವರು ಹಾಗೂ ಉಪನ್ಯಾಸಕರು ಸೇರಿದಂತೆ ೧೦ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್, ಉಪಾಧ್ಯಕ್ಷ ಸತೀಶ್ ರಾವ್, ಖಜಾಂಜಿ ರೂಪರೇಖಾ, ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಮಹೇಶ್ ಪ್ರಸನ್ನ ಹಾಜರಿದ್ದರು.