ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ನಾಂದಿ ಫೌಂಡೇಶನ್ ಹಾಗೂ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ೬ ದಿನಗಳ ‘ಮಹೀಂದ್ರ ಪ್ರೈಡ್ ಕ್ಲಾಸ್ ರೂಂ’ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಿತು.ನಾಂದಿ ಫೌಂಡೇಶನ್‌ನ ವಿಶೇಷ ತರಬೇತುದಾರರಾದ ಸಾಧಿಕಾ ಬಾನು, ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿ, ಹಾಜರಿದ್ದ ಎಲ್ಲ ವಿದ್ಯಾರ್ಥಿನಿಯರಿಗೆ ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಸಂಚಾಲಕ ಹಾಗೂ ಕಾರ್ಯಕ್ರಮದ ಸಂಯೋಜಕ ಡಾ. ಉಮೇಶ್ ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕರಾದ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಗೌರಿ ಎಸ್. ಭಟ್ ಉಪಸ್ಥಿತರಿದ್ದರು.ತೃತೀಯ ಬಿ.ಕಾಂ.ನ ದಿಯಾ ಮತ್ತು ದಿಶಾ ಪ್ರಾರ್ಥಿಸಿದರು. ದಿವ್ಯಾಶ್ರೀ ಸ್ವಾಗತಿಸಿದರು. ಮನಿಷಾ ಎನ್. ಕರ್ಕೇರ ಕಾರ್ಯಕ್ರಮ ನಿರ್ವಹಿಸಿದರು. ಅಂತಿಮ ಬಿ.ಬಿ.ಎ. ವಿದ್ಯಾರ್ಥಿನಿ ಬಿ. ಶ್ರೀದೇವಿ ವಾರಂಬಳ್ಳಿ ವಂದಿಸಿದರು.