ಸಾರಾಂಶ
ದೇಶದಲ್ಲಿ ಸಾಂವಿಧಾನಿಕ ಮೌಲ್ಯ ಬಲಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಒಬಿಸಿ ವಿಭಾಗದ ವತಿಯಿಂದ ಆ.16 ರಂದು ಗುಂಡ್ಲುಪೇಟೆಯಲ್ಲಿ ವಾಯ್ಸ್ ಆಫ್ ಒಬಿಸಿ 100 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಆರ್.ಚೇತನ್ ಕುಮಾರ್ ಹೇಳಿದರು.
ಚಾಮರಾಜನಗರ: ದೇಶದಲ್ಲಿ ಸಾಂವಿಧಾನಿಕ ಮೌಲ್ಯ ಬಲಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಒಬಿಸಿ ವಿಭಾಗದ ವತಿಯಿಂದ ಆ.16 ರಂದು ಗುಂಡ್ಲುಪೇಟೆಯಲ್ಲಿ ವಾಯ್ಸ್ ಆಫ್ ಒಬಿಸಿ 100 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಆರ್.ಚೇತನ್ ಕುಮಾರ್ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸ್ಥಳೀಯ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಉಸ್ತುವಾರಿ ನಿಶ್ಚಿತ್, ರಾಜ್ಯ ಉಪಾಧ್ಯಕ್ಷ ವಿನೋದ್ ರಾಜ್ ಸೇರಿದಂತೆ ಇತರೆ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿಯೂ ಕಾರ್ಯಕ್ರಮ ನಡೆಸಲಾಗುವುದು ಎಂದರು.ಜಿಪಂ ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ ಮಾತನಾಡಿ, ಮೊದಲ ಹಂತದಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಸದರು. ಶಾಸಕರನ್ನು ಒಳಗೊಂಡಂತೆ ಕಾರ್ಯಕ್ರಮ ನಡೆಸಲಾಗುತ್ತದೆ. ಹಿಂದುಳಿದ ವರ್ಗಗಳ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಾನಮಾನಗಳನ್ನು ಗುರುಸುವ ನಿಟ್ಟಿನಲ್ಲಿ ಕಾರ್ಯಕ್ರಮ ಅನುಕೂಲವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಸ್ತುವಾರಿ ನಿಶ್ಚಿತ್, ಚಿನ್ನಸ್ವಾಮಿ, ಗುರುಶಾಂತು, ಮಲಿಯಶೆಟ್ಟಿ, ಗೋವಿಂದ, ಕೃಷ್ಣವೇಣಿ ,ಚನ್ನೇಗೌಡ, ಬಳೇಪೇಟೆ ಸಿದ್ದರಾಜು, ಕುಮಾರ್ ಹಾಜರಿದ್ದರು.