ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ತಾಲೂಕು ಒಕ್ಕಲಿಗ ಸಮುದಾಯ ಕಾರ್ಯಕರ್ತರು ನಗರದಲ್ಲಿ ಹೆದ್ದಾರಿ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದ ಬಳಿ ಸೇರಿದ ಶ್ರೀನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ, ಚುಂಚಶ್ರೀ ಗೆಳೆಯರ ಬಳಗ ಹಾಗೂ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಚುಂಚಶ್ರೀ ಗೆಳೆಯರ ಬಳಗ ಅಧ್ಯಕ್ಷ ಡಾ.ಬಿ.ಕೃಷ್ಣ, ಕಳೆದ ವಿಧಾನಸಭಾ ಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅನ್ನು ಸಂಘಟಿಸಿ ಮೂಲಕ 136ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಿ ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳನ್ನು ಮುಖ್ಯಮಂತ್ರಿಗಳನ್ನಾಗಿ ಮಾಡುವುದಾಗಿ ಹೈಕಮಾಂಡ್ ಒಪ್ಪಂದ ಮಾಡಿತ್ತು. ಆದರೆ, ಈಗಾಗಲೇ ಎರಡುವರೇ ವರ್ಷಗಳ ಕಾಲ ಜನಾನುರಾಗಿಯಾಗಿ ಆಡಳಿತ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ.ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕೆಂದು ಆಗ್ರಹಿಸಿದರು.
ಶ್ರೀನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ದೇಶಹಳ್ಳಿ ಶಿವಪ್ಪ ಮಾತನಾಡಿ, ಪಕ್ಷಕ್ಕಾಗಿ ಡಿ.ಕೆ.ಶಿವಕುಮಾರ್ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿದ್ದಾಗ ಮುನ್ನಡೆಸಿ ಈ ಹಂತಕ್ಕೆ ತಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಪಕ್ಷ ಬಲಿಷ್ಠಗೊಳಿಸುವಲ್ಲಿಯೂ ಅವರದೇ ಪಾಲು ಹೆಚ್ಚಿದೆ. ಹೀಗಾಗಿಅವರಿಗೆ ಸಿಎಂ ಸ್ಥಾನ ನೀಡಬೇಕೆಂಬುದು ಸಮುದಾಯದ ಕೂಗಾಗಿದೆ ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಶಿವರಾಂ, ಲಕ್ಷ್ಮಮ್ಮ, ಹರೀಶ್, ಶಿವಕುಮಾರ್, ಗೋವಿಂದರಾಜು, ಸುರೇಶ್, ಕುಮಾರ್, ಮುರಳಿ, ಮರಿದೇವರು, ಬಸವರಾಜು, ಪ್ರಭಾಕರ್, ನಾಗರಾಜ್, ಚನ್ನಪ್ಪ, ಕೃಷ್ಣೇಗೌಡ ಸೇರಿದಂತೆ ಮತ್ತಿತರರು ಇದ್ದರು.
ಇಂದು ವಿದ್ಯುತ್ ವ್ಯತ್ಯಯಮಳವಳ್ಳಿ: ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ (ಬಿ.ಜಿ.ಪುರ) 66/11 ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಇರುವುದರಿಂದ ನ.25ರಂದು ಬೆಳಗ್ಗೆ 8 ರಿಂದ ಸಂಜೆ 5ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೇಂದ್ರ ವ್ಯಾಪ್ತಿಯ ಬೆಳಕವಾಡಿ, ಬಿ.ಜಿ.ಪುರ, ಕಗ್ಗಲೀಪುರ, ದ್ಯಾವಪಟ್ಟಣ, ಹೊಸಹಳ್ಳಿ, ತಿಗಡಹಳ್ಳಿ, ಕಿರಗಸೂರು, ಅಂತರಾಯನಪುರದದೊಡ್ಡಿ, ಪೂರಿಗಾಲಿ, ಮುಟ್ಟನಹಳ್ಳಿ, ಕೊಡಗಳ್ಳಿ, ದೊಡ್ಡಬವಳ್ಳಿ, ಸೋಮನಹಳ್ಳಿ, ಚಿಕ್ಕಬಾಗಿಲು, ಹುಲ್ಲಂಬಳ್ಳಿ, ಸರಗೂರು, ಬಿ.ಜೆ.ಮೊಳೆ, ಮಲ್ಲಿನಾಥಪುರ, ಹಾಗೂ ಸುತ್ತ ಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಅಡಚಣೆಯಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಪುಟ್ಟಸ್ವಾಮಿ ತಿಳಿಸಿದ್ದಾರೆ.
;Resize=(128,128))
;Resize=(128,128))