ಮತದಾನ ಮಾಡಿ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣಕರ್ತರಾಗಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ

| Published : Mar 31 2024, 02:01 AM IST / Updated: Mar 31 2024, 02:02 AM IST

ಮತದಾನ ಮಾಡಿ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣಕರ್ತರಾಗಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಮತದಾನ ನಮ್ಮ ಹಕ್ಕಾಗಿದ್ದು ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣಿಭೂತರಾಗಬೇಕೆಂದು ಸಹಾಯಕ ಚುನಾವಣಾಧಿಕಾರಿಗಳಾದ ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ಮತದಾನ ನಮ್ಮ ಹಕ್ಕಾಗಿದ್ದು ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣಿಭೂತರಾಗಬೇಕೆಂದು ಸಹಾಯಕ ಚುನಾವಣಾಧಿಕಾರಿಗಳಾದ ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ತಿಳಿಸಿದರು.

ನಗರದ ನಗರಸಭೆ ಮುಂಭಾಗದಲ್ಲಿ ಶನಿವಾರ ತಾಲೂಕು ಆಡಳಿತ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ಬಂದಿ ರುವ ಮತದಾನದ ಹಕ್ಕನ್ನು ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಚಲಾಯಿಸುವುದು ತಮ್ಮ ಕರ್ತವ್ಯವೂ ಆಗಿದೆ. ಮತದಾನದ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಿಂದಿಡಿದು ನಗರ ಪ್ರದೇಶಗಳಲ್ಲಿ ಮತದಾನ ಅಭಿಯಾನದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಏ.೨೬ರಂದು ಮತದಾನ ಮಾಡಿಯೇ ಮಾಡುತ್ತೇನೆಂದು ಪ್ರತಿಜ್ಞೆ ಮಾಡಿ ಸಹಿ ಸಂಗ್ರಹಿಸುವ ಕಾರ್ಯ ಮಾಡಲಾಗುತ್ತಿದೆ. ಅಲ್ಲದೆ ಯುವ ಮತದಾರರನ್ನು ಆಕರ್ಷಿಸಲು ಮತದಾರರ ಸೆಲ್ಪಿ ಬೂತ್ ತೆರೆಯಲಾಗಿದೆ. ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುತ್ತೇನೆಂಬ ಘೋಷವಾಕ್ಯದೊಂದಿಗೆ ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಕಾಪಾಡಬೇಕೆಂದು ತಿಳಿಸಿದರು. ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ ಮಾತನಾಡಿ, ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗುವಂತಹ ಮತಗಟ್ಟೆಗಳಲ್ಲಿ ಅಭಿಯಾನ, ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ನಗರಸಭೆಯಿಂದ ಮತದಾನಕ್ಕಾಗಿ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ೮೫ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತ ನರಿಗೆ ಮನೆಯಲ್ಲಿಯೇ ಇದ್ದು ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಮತಹಾಕುವವರ ಸಂಖ್ಯೆ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಕಡಿಮೆ ಇದ್ದು, ಮತದಾರರಲ್ಲಿ ಜಾಗೃತಿ ಮೂಡಿಸಲು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆ ಮನೆಗಳಿಗೆ ತೆರಳಿ ಅರಿವು ಮೂಡಿಸಲಿದ್ದಾರೆ. ಸೆಲ್ಫಿ ಪಾಯಿಂಟ್‌ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ಜಾಲತಾಣಗಳಲ್ಲಿ ಹಾಕುವ ಮೂಲಕವೂ ಮತದಾನದ ಬಗ್ಗೆ ಅರಿವು ಮೂಡಲಿದೆ. ಆದ್ದರಿಂದ ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಮತಹಾಕುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಬೇಕೆಂದರು. ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನಾಗರಾಜು ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ.೧೦೦ರಷ್ಟು ಮತದಾನ ಮಾಡಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಎಲ್‌ಓಗಳು, ಅಧಿಕಾರಿ ವರ್ಗದವರು ಮತದಾನದ ಬಗ್ಗೆ ಜನರಲ್ಲಿ ಹೆಚೆಚ್ಚು ಅರಿವು ಮೂಡಿಸಬೇಕು ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಪವನ್‌ಕುಮಾರ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಅಶೋಕ್, ನಗರಸಭೆ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಎಲ್‌ಓಗಳು, ಸಿಬ್ಬಂದಿಗಳು ಭಾಗವಹಿಸಿದ್ದರು. ನಂತರ ಮತದಾನದ ಸಹಿ ಬೋರ್ಡಿಗೆ ಸಹಿ ಮಾಡಿ, ಸೆಲ್ಪಿ ಪಾಯಿಂಟ್‌ನಲ್ಲಿ ಸೆಲ್ಪಿ ತೆಗೆಸಿಕೊಳ್ಳುವ ಮೂಲಕ ಜಾಗೃತಿ ಮೂಡಿಸಿದರು.