ಮತದಾನದಿಂದ ಪ್ರಜಾಪ್ರಭುತ್ವ ಮೌಲ್ಯ ಹೆಚ್ಚಿಸಿ: ಕಲಿಮುಲ್ಲಾ ಕರೆ

| Published : Apr 04 2024, 01:00 AM IST

ಮತದಾನದಿಂದ ಪ್ರಜಾಪ್ರಭುತ್ವ ಮೌಲ್ಯ ಹೆಚ್ಚಿಸಿ: ಕಲಿಮುಲ್ಲಾ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾಗರ ಪಟ್ಟಣದ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ್‍ಯಾಲಿಗೆ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ ಚಾಲನೆ ನೀಡಿ, ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ಕನ್ನಡಪ್ರಭ ವಾರ್ತೆ ಸಾಗರ

ನಮ್ಮ ತಾಲ್ಲೂಕಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಶೇ.೧೦೦ ಮತದಾನ ನಡೆಯಬೇಕು. ಈ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ನಿರಂತರವಾಗಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಹಸೀಲ್ದಾರ್ ಸೈಯದ್ ಕಲಿಮುಲ್ಲಾ ಹೇಳಿದರು.

ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಸಾಗರ ಹೋಟೆಲ್ ವೃತ್ತದಲ್ಲಿ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ್‍ಯಾಲಿ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಹೋಲಿಕೆ ಮಾಡಿದಾಗ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇರುತ್ತದೆ. ಈ ಹಿನ್ನೆಲೆಯಲ್ಲಿ ನಗರ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಲು ಬೈಕ್ ರ್‍ಯಾಲಿ ಏರ್ಪಡಿಸಲಾಗಿದೆ. ಹೆಚ್ಚು ಜನರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪ ಮಾತನಾಡಿ, ಭಾರತ ದೇಶ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿದೆ. ಇಂತಹ ಪ್ರಜಾಪ್ರಭುತ್ವದ ಮೌಲ್ಯ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲೆ ಇದ್ದು, ಮತದಾನದ ಮೂಲಕ ನಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ. ಮತದಾನ ನಮ್ಮ ಹಕ್ಕು ಎನ್ನುವುದನ್ನು ಪ್ರತಿಯೊಬ್ಬರು ಸಂಕಲ್ಪ ಕೈಗೊಂಡು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಸುನಿತಾ, ಚುನಾವಣೆ ವಿಭಾಗದ ಫರ್ನಾಂಡಿಸ್, ತಾಲ್ಲೂಕು ಪಂಚಾಯ್ತಿ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹ್ಮದ್ ಹನೀಫ್ ಇನ್ನಿತರರು ಹಾಜರಿದ್ದರು.