೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಮುಂದಾಗಬೇಕೆಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ರಾಘವೇಂದ್ರ ಕರೆ ನೀಡಿದರು.
ಭದ್ರಾವತಿ: ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಮುಂದಾಗಬೇಕೆಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ರಾಘವೇಂದ್ರ ಕರೆ ನೀಡಿದರು.
ಭಾನುವಾರ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ಸಮರ್ಥ ನಾಯಕರನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ಈ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು. ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿಯಾದ ಪ್ರಧಾನ ಸಿವಿಲ್ ನ್ಯಾಯಾಧೀಶ ವಿ.ರವಿಕುಮಾರ್, ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ವೇಳೆ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು.ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪರುಸಪ್ಪ ಕುರುಬರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಸಿ.ಕೇಶವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ಮಂಜ್ಯಾನಾಯ್ಕ ಸ್ವಾಗತಿಸಿದರು.