ಸಾರಾಂಶ
ಬೆಳಗಾವಿ ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗುತ್ತಿದೆ. ಪ್ರಜ್ಞಾವಂತರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗುತ್ತಿದೆ. ಪ್ರಜ್ಞಾವಂತರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.
ನಗರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಂದ ಮತದಾನದ ಕುರಿತು ನಗರದ ಚನ್ನಮ್ಮ ವೃತ್ತದಲ್ಲಿ ನಡೆದ ಜಾಗೃತಿ ಜಾಥಾ ಚಾಲನೆಯಲ್ಲಿ ಮಾತನಾಡಿದ ಅವರು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಲಿಂಗತ್ವ ಅಲ್ಪ ಸಂಖ್ಯಾತರು ಕೂಡ ಮತದಾನದಿಂದ ದೂರ ಉಳಿಯದೇ ಮತದಾನದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.ನಗರದ ಚನ್ನಮ್ಮ ವೃತ್ತದಲ್ಲಿ ಪ್ರಾರಂಭವಾದ ಜಾಥಾ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನ ವನದ ರಸ್ತೆಯ ಮೂಲಕ ಕೃಷ್ಣದೇವರಾಯ ವೃತ್ತದಿಂದ ಮಹಾನಗರ ಪಾಲಿಕೆವರೆಗೆ ನಡೆಯಿತು. ಸುಮಾರು 300ಕ್ಕೂ ಹೆಚ್ಚು ಜನರಿಂದ ಮತದಾನದ ಘೊಷಣೆ ಕೂಗುವುದು, ಜಾಗೃತಿ ಫಲಕಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಲಾಯಿತು.
ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಪಂ ಯೋಜನಾ ನಿರ್ದೇಶಕ ಡಾ.ಎಂ.ಕೃಷ್ಣರಾಜು, ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಪಾಲಿಕೆ ಆಯುಕ್ತ ಲೊಕೇಶ.ಪಿ.ಎನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಆರ್.ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ.ಶ್ರೀನಿವಾಸ, ನಗರ ಸಿಡಿಪಿಒ ರಾಮಮುರ್ತಿ ಕೆ.ವಿ, ಗ್ರಾಮೀಣ ಸಿಡಿಪಿಒ ಸುಮಿತ್ರಾ.ಡಿ.ಬಿ, ಮಹಿಳಾ ಅಭಿವೃದ್ಧಿ ನಿಗಮದ ನಿರೀಕ್ಷಕಿ ರೂಪಾ ಪವಾರ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.