ಸಾರಾಂಶ
ಕನ್ನಡಪ್ರಭ ವಾರ್ತೆ ನೆಲಮಂಗಲ ಪ್ರತಿಯೊಬ್ಬ ಕಾರ್ಯಕರ್ತರು ತಾನೇ ಅಭ್ಯರ್ಥಿಯೆಂದು ಭಾವಿಸಿ ಬೂತ್ ಮಟ್ಟದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿದರೆ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ನೆಲಮಂಗಲ ಪ್ರತಿಯೊಬ್ಬ ಕಾರ್ಯಕರ್ತರು ತಾನೇ ಅಭ್ಯರ್ಥಿಯೆಂದು ಭಾವಿಸಿ ಬೂತ್ ಮಟ್ಟದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿದರೆ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.
ತಾಲೂಕಿನ ಅರಿಶಿನಕುಂಟೆ ಬಳಿ ಹಮ್ಮಿಕೊಂಡಿದ್ದು ಲೋಕಸಭಾ ಚುನಾವಣೆಗೆ ಮತಯಾಚಿಸಿ ಮಾತನಾಡಿದ ಅವರು, ದೇಶಕ್ಕೆ ಮೋದಿ ಅವರು ಹಾಗೂ ದೇವೇಗೌಡರು ದೇಶಕ್ಕೆ ಉತ್ತಮ ನಾಯಕತ್ವ ನೀಡಿದ್ದಾರೆ. ಮುಖಂಡರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸಬೇಕು. ದೇಶದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಘೋಷಣೆ ಕೇಳಿ ಬರುತ್ತಿದೆ. ಆದ್ದರಿಂದ ಪ್ರತಿ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತ ಕೊಡಸಬೇಕು ಎಂದರು.ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ದೇಶಕ್ಕೆ ಮೋದಿ ಅವರ ಕೊಡುಗೆ ಅಪಾರ. ಪ್ರತಿಯೊಬ್ಬ ಕಾರ್ಯಕರ್ತರು ಗ್ರಾಪಂ ಚುನಾವಣೆಯಂತೆ ಪ್ರತಿ ಮನೆಮೆನೆಗೆ ಭೇಟಿ ನೀಡಿ ಎನ್‌ಡಿಎ ಅಭ್ಯರ್ಥಿ ಡಾ. ಸುಧಾಕರ್ ಗೆಲುವಿಗೆ ಶ್ರಮಿಸಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಮಾಜಿ ಶಾಸಕರಾದ ಎಂ.ವಿ.ನಾಗರಾಜು, ನೆ.ಲ.ನರೇಂದ್ರಬಾಬು, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ, ನಗರಸಭೆ ಸದಸ್ಯ ಅಂಜನಮೂರ್ತಿ, ಸುನೀಲ್‌ಮೂಡ್, ಶಿವಕುಮಾರ್, ಎನ್.ಗಣೇಶ್, ಹೆಚ್ಚುವರಿ ಸದಸ್ಯ ಅಂಜನಮೂರ್ತಿ, ರಾಮಮೂರ್ತಿ, ಮುನಿರಾಜು, ಕೃಪಾನಂದ್, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಉಪಾಧ್ಯಕ್ಷ ರಾಹುಲ್‌ಗೌಡ, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಕಾರ್ಯಾಧ್ಯಕ್ಷ ಬೂದಿಹಾಲ್‌ರಾಜು, ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ಚೌಧರಿ, ನಗರ ಅಧ್ಯಕ್ಷ ಕೇಶವ್, ಮಹಿಳ ಘಟಕ ತಾಲೂಕು ಅಧ್ಯಕ್ಷೆ ಮಂಜುಳಾಸುರೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬೃಂಗೇಶ್, ವಕೀಲ ಕನಕರಾಜು, ಮುಖಂಡ ಸಪ್ತಗಿರಿ ಶಂಕರ್‌ನಾಯಕ್, ಉಮೇಶ್, ಭವಾನಿಶಂಕರ್, ಬೈರೇಗೌಡ, ಬಾವಿಕೆರೆ ಮಹಂತೇಶ್, ವಾದಕುಂಟೆ ರಮೇಶ್, ಸುರೇಂದ್ರ, ಸುರೇಶ್, ಮಂಜುನಾಥ್, ಶಿವಕುಮಾರ್, ರಾಜಮ್ಮ ಉಪಸ್ಥಿತರಿದರು. ಪೊಟೊ-13ಕೆಎನ್‌ಎಲ್‌ಎಮ್1-ನೆಲಮಂಗಲದ ಅರಿಶಿನಕುಂಟೆ ಬಳಿಯ ಶ್ರೀ ಅಂಜನೇಯಸ್ವಾಮಿ ದೇವಾಲಯ ಬಳಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಮತಯಾಚಿಸಿದರು.