ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ: ಟಿ.ಆರ್. ರಾಘವೇಂದ್ರ

| Published : Apr 03 2024, 01:30 AM IST

ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ: ಟಿ.ಆರ್. ರಾಘವೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ಸ್ವೀಪ್ ಸಮಿತಿ ಹಾಗೂ ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಕ್ತ ಮತದಾನ ಮತ್ತು ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕನಕಪುರಭಾರತದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸಲು ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸುವಂತೆ ಸಹಾಯಕ ಚುನಾವಣಾಧಿಕಾರಿ ಟಿ.ಆರ್. ರಾಘವೇಂದ್ರ ಹೇಳಿದರು.

ನಗರದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಕ್ತ ಮತದಾನ ಮತ್ತು ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಲೋಕಸಭೆ ಚುನಾವಣೆ ಮತದಾನ ಹಬ್ಬದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.

ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಚುನಾವಣಾ ಇಲಾಖೆ ಮಾಡಿದೆ, ಚುನಾವಣೆಯಲ್ಲಿನ ಅಕ್ರಮಗಳನ್ನು ತಡೆಗಟ್ಟಿ ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಲು ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ 297 ಮತಗಟ್ಟೆಗಳಿವೆ, 2,27,೦೦೦ ಮತದಾರರಿದ್ದಾರೆ. ಏ.26 ರಂದು ನಡೆಯುವ ಮತದಾನದಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕೆಂದು ಮನವಿ ಮಾಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು. ತಾಲೂಕು ಕಚೇರಿ ಆವರಣದಿಂದ ಮತದಾನ ಜಾಗೃತಿ ಪ್ರಾರಂಬಿಸಿ ನಗರದ ಎಂ.ಜಿ. ರಸ್ತೆ, ಬಸ್ ನಿಲ್ದಾಣದ ಮೂಲಕ ಚನ್ನಬಸಪ್ಪ ವೃತ್ತದಲ್ಲಿ ಜಮಾವಣೆಗೊಂಡ ಅಧಿಕಾರಿಗಳು ಸಿಬ್ಬಂದಿ, ಮೇಣದ ಬತ್ತಿ ಹಚ್ಚಿ ನಮ್ಮ ಮತ ನಮ್ಮ ಹಕ್ಕು, ನನ್ನ ದೇಶ ನನ್ನ ಹಕ್ಕು ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ತಹಸೀಲ್ದಾರ್ ಡಾ.ಸ್ಮಿತಾರಾಮು, ತಾಪಂ ಇಒ ಮೋಹನ್‌ ಬಾಬು, ನಗರಸಭೆ ಪೌರಾಯಕ್ತ ಎಂ.ಎಸ್. ಮಹದೇವ್, ಪಿಡಿಒಗಳು ಸೇರಿ ತಾಲೂಕು ಕಚೇರಿ, ತಾಪಂ, ನಗರಸಭೆ ನೌಕರರು, ಸಿಬ್ಬಂದಿ, ಕಾಲೇಜ ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

-------------

ಕನಕಪುರ ತಾಲೂಕು ಆಡಳಿತ, ಸ್ವೀಪ್ ಸಮಿತಿ ಹಾಗೂ ತಾಪಂ ಸಂಯುಕ್ತ ಆಶ್ರಯದಲ್ಲಿ ಮತದಾನದ ಬಗ್ಗೆ ಜಾಗೃತಿ ಜಾಥ ನಡೆಸಿ ಅರಿವು ಮೂಡಿಸಲಾಯಿತು.