ಸಾರಾಂಶ
ಅರ್ಹರೆಲ್ಲರೂ ಮತದಾನ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಈ ಬಾರಿ ಪ್ರತಿಶತ 100% ರಷ್ಟು ಮತದಾನ ಮಾಡಿಸುವುದು ನಮ್ಮ- ನಿಮ್ಮೆಲ್ಲರ ಗುರಿ ಆಗಿದೆ
ಗದಗ: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನಿರ್ಭೀತರಾಗಿ ಮತದಾನ ಮಾಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.
ತಾಲೂಕಿನ ಹುಯಿಲಗೋಳ ಗ್ರಾಪಂ ವ್ಯಾಪ್ತಿಯ ಹಿರೇಕೊಪ್ಪ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕೂಲಿಕಾರರಿಗೆ ಸಾರ್ವತ್ರಿಕ ಲೋಕ ಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅರ್ಹರೆಲ್ಲರೂ ಮತದಾನ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಈ ಬಾರಿ ಪ್ರತಿಶತ 100% ರಷ್ಟು ಮತದಾನ ಮಾಡಿಸುವುದು ನಮ್ಮ- ನಿಮ್ಮೆಲ್ಲರ ಗುರಿ ಆಗಿದೆ. ಮೇ.7 ರಂದು ನಮ್ಮ ಭಾಗದಲ್ಲಿ ನಡೆಯುವ ಲೋಕಸಭೆ ಚುನಾವಣೆಯ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸೋಣ ಎಂದು ಮನವಿ ಮಾಡಿದರು.
ನರೇಗಾ ಕೂಲಿಕಾರರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಾಸು ಪೂಜಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಸಿಬ್ಬಂದಿ, ನರೇಗಾ ಐಇಸಿ ಸಂಯೋಜಕ ವಿರೇಶ್, ಬಿ, ಎಫ್,ಟಿ ಬಸವರಾಜ್ ಪಟ್ಟಣದ, ಗ್ರಾಕಾಮೀ ಸಾವಿತ್ರಿ ಕಾಳೆ ಹಾಗೂ ನರೇಗಾ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))