ಸಾರಾಂಶ
ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಅನೀಲಗೌಡ ಬಿರಾದಾರ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಇಂಡಿ
ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಅನೀಲಗೌಡ ಬಿರಾದಾರ ಮನವಿ ಮಾಡಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಲು, ದೇಶದ ಅಭಿವೃದ್ಧಿಗಾಗಿ ಅವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಗೆ ಮತ್ತೊಮ್ಮೆ ಮತ ನೀಡಿ ಆಶೀರ್ವದಿಸಬೇಕು. ಈ ದೇಶಕ್ಕೆ ಮೋದಿ ಅವರ ನಾಯಕತ್ವ ಅವಶ್ಯಕವಾಗಿದೆ. ಹಾಗೆಯೇ ಜಿಲ್ಲೆಗೆ ಹಿರಿಯ ನಾಯಕರಾದ ರಮೇಶ ಜಿಗಜಿಣಗಿ ಅವರ ನಾಯಕತ್ವವೂ ಅಗತ್ಯವಾಗಿದೆ. ಹೀಗಾಗಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಈ ದೇಶವನ್ನಾಳಿದ ದಿನದಂದು ದೇಶಕ್ಕಾಗಿ ಏನನ್ನು ಮಾಡಲಿಲ್ಲ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.