ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ

| Published : Apr 17 2024, 01:23 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಿಂದಲೇ ಭಾರತ ದೇಶ ಸದೃಢ, ಸುಭದ್ರ, ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದ್ದು, ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರುಪ್ರಧಾನಿ ನರೇಂದ್ರ ಮೋದಿ ನಾಯಕತ್ವದಿಂದಲೇ ಭಾರತ ದೇಶ ಸದೃಢ, ಸುಭದ್ರ, ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದ್ದು, ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನೇಸರಗಿ ಬಜಾರ್‌ ಪೇಟೆಯ ಕರ್ನಾಟಕ ಚೌಕನಲ್ಲಿ ಭಾನುವಾರ ಲೋಕಸಭೆ ಚುನಾವಣೆ ಪ್ರಚಾರಾರ್ಥ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿ ಅವರ ನಾಯಕತ್ವವನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದ ಅವರು, ಬೆಳಗಾವಿ ಜಿಲ್ಲೆಗೆ ಹಾಗೂ ನನಗೂ ಮೊದಲಿನಿಂದಲೂ ಅನ್ಯೋನ್ಯ ಸಂಬಂಧವಿದೆ ಎಂದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಇತರ ದೇಶಗಳು ಮೆಚ್ಚಿಕೊಂಡಿದ್ದು, ಬರುವ ಮೇ 7 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಾಗೇರಿಯವರಿಗೆ ಮತ ನೀಡಿ ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು. ಕಿತ್ತೂರು ಮಂಡಳ ಅಧ್ಯಕ್ಷ ಡಾ.ಬಸವರಾಜ ಪರವಣ್ಣವರ, ಕಿತ್ತೂರು ಜೆಡಿಎಸ್ ಬ್ಲಾಕ್ ಅಧ್ಯಕ್ಷ ಎಂ.ವೈ. ಸೋಮಣ್ಣವರ. ಶ್ರೀಕರ ಕುಲಕರ್ಣಿ, ಮಲ್ಲಿಕಾರ್ಜುನ ತುಬಾಕಿ, ಕೆಂಚಪ್ಪ ಕಳ್ಳಿಬಡ್ಡಿ, ಗ್ರಾಪಂ ಅಧ್ಯಕ್ಷ ನಿಂಗಪ್ಪ ಮಾಳಣ್ಣವರ, ಎಸ್.ಎಂ. ಪಾಟೀಲ, ಅಡಿವೆಪ್ಪ ಹೊಸಮನಿ, ಉಳವಪ್ಪ ಉಳ್ಳಾಗಡ್ಡಿ, ಡಾ.ಮಹಾಂತೇಶ ಕೂಲಿನವರ, ಯಲ್ಲನಗೌಡ ದೊಡಗೌಡರ, ಗ್ರಾಪಂ ಸದಸ್ಯ ಮಲ್ಲಿಕಾರ್ಜುನ ಸೋಮಣ್ಣವರ, ವೀರಭದ್ರ ಚೋಬಾರಿ, ತೇಜಪ್ಪಗೌಡ ಪಾಟೀಲ, ಶ್ರೀಶೈಲ ಕಮತಗಿ, ಸಂತೋಷ ತಿಳಗಂಜಿ, ಬಸವರಾಜ ತುಬಾಕಿ, ಅಡಿವೆಪ್ಪ ಚಿಗರಿ, ಪ್ರದೀಪಗೌಡ ದೊಡಗೌಡರ ಹಾಗೂ ಇತರರು ಇದ್ದರು.