ಸಾರಾಂಶ
ದೇಶದ ಸಮಗ್ರ ಅಭಿವೃದ್ಧಿಗೆ ಮತದಾನದ ಮಹತ್ವ ಅರಿತು 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೇ ಹಕ್ಕು ಚಲಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ದೇಶದ ಸಮಗ್ರ ಅಭಿವೃದ್ಧಿಗೆ ಮತದಾನದ ಮಹತ್ವ ಅರಿತು 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೇ ಹಕ್ಕು ಚಲಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ ಕರೆ ನೀಡಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
18 ವರ್ಷ ತುಂಬಿದ ಎಲ್ಲರೂ ತಮ್ಮ ಹೆಸರು ನೋಂದಾಯಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಗೊಂಡು ಚುನಾವಣೆಯಲ್ಲಿ ಸಕ್ರಿಯವಾಗಿ ಮತದಾನ ಮಾಡಿ ಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಕಾರಣರಾಗಬೇಕು ಎಂದರು.ಎಲ್ಲ ಚುನಾವಣೆಗಳಲ್ಲೂ ಪಾಲ್ಗೊಂಡು ಆಡಳಿತ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾನದ ಮಹತ್ವ ಅರಿತು ಮತದಾನ ಮಾಡಬೇಕು. 18 ವರ್ಷ ತುಂಬುವ ಮುನ್ನ ಹಾಗೂ ಪರವಾನಗಿ ಇಲ್ಲದೇ ವಾಹನಗಳನ್ನು ವಿದ್ಯಾರ್ಥಿಗಳು ಚಲಾಯಿಸಬಾರದು. ಅದರಲ್ಲೂ ವಿಲೀಂಗ್ ನಂಥ ಕೆಟ್ಟ ನಡವಳಿಕೆಯನ್ನು ಮಾಡಬಾರದು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೆ.ಎನ್. ಲೋಕೇಶ್ ಮಾತನಾಡಿ, ಎಲ್ಲ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.ಇದಕ್ಕೂ ಮುನ್ನ ಪಟ್ಟಣದ ತಾಲೂಕು ಕಚೇರಿಯಿಂದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತದಾನದ ಮಹತ್ವ ಹಾಗೂ ಹಕ್ಕಿನ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಜಾಥಾ ನಡೆಸಿದರು.
ಈ ವೇಳೆ ಪ್ರಧಾನ ಸಿವಿಲ್ ನ್ಯಾಯಾಧೀಶ ಸಚಿನ್ ಕುಮಾರ್ ಶಿವಪೂಜಿ, ತಾ.ಪಂ.ಎಲ್. ಮಮತಾ, ಸಹಾಯಕ ಸರ್ಕಾರಿ ಅಭಿಯೋಜಕ ಜೆ. ರವಿಸೆಂತಿಲ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಸ್ವಾಮಿ ವಿವೇಕಾನಂದ ಪ್ರಾಂಶುಪಾಲ ಕೆ. ಶಿವಮೂರ್ತಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ. ಶ್ರೀನಿವಾಸ್, ವಕೀಲರಾದ ಮಲ್ಲಪ್ಪ, ಜಗದೀಶ್, ವೆಂಕಟೇಶ್, ಮೋಹನ್ ಕುಮಾರ್ ಇದ್ದರು.