ಬಲಿಷ್ಠ ದೇಶಕ್ಕಾಗಿ ಪ್ರಧಾನಿ ಮೋದಿಗೆ ಮತ ಹಾಕಿ: ಬೊಮ್ಮಾಯಿ

| Published : Apr 09 2024, 12:48 AM IST

ಸಾರಾಂಶ

ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ರಾಣಿಬೆನ್ನೂರು: ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.ತಾಲೂಕಿನ ನದಿಹರಳಹಳ್ಳಿ, ಕರೂರ, ಚಳಗೇರಿ ಹಾಗೂ ಹುಲಿಕಟ್ಟಿ ಗ್ರಾಮಗಳಲ್ಲಿ ಭಾನುವಾರ ರಾತ್ರಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷ ದೇಶವನ್ನು ಬಲಿಷ್ಠಗೊಳಿಸಿದ್ದಾರೆ. ಅವರು ಆರ್ಥಿಕವಾಗಿ, ಸಾಮಾಜಿಕವಾಗಿ ದೇಶವನ್ನು ಬಲಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದಲೂ ಪ್ರಧಾನಮಂತ್ರಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಕುಡಿಯಲು ನೀರು, ಅಕ್ಕಿ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಲು ಮತದಾನದ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ, ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಮಂಜುನಾಥ ಓಲೇಕಾರ, ತಾಲೂಕು ಗ್ರಾಮೀಣ ಘಟಕದ ಅಧ್ಯಕ್ಷ ಪರಮೇಶ ಗೂಳಣ್ಣನವರ, ಮಾಳಪ್ಪ ಪೂಜಾರ, ಬಸವರಾಜ ಚಳಗೇರಿ, ಸಿದ್ದು ಚಿಕ್ಕಬಿದರಿ, ಆನಂತ ಇಟಗಿ, ಕುಬೇರಪ್ಪ ಕೊಂಡಜ್ಜಿ, ಸುಭಾಶ ಶಿರಗೇರಿ ಮತ್ತಿತರರಿದ್ದರು. ಇದಕ್ಕೂ ಪೂರ್ವದಲ್ಲಿ ಬಸವರಾಜ ಬೊಮ್ಮಾಯಿ ಹುಲಿಕಟ್ಟಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಕುರುಬ ಸಮಾಜದ ಮುಖಂಡರು ಅವರಿಗೆ ಸನ್ಮಾನ ಮಾಡಿದರು.