ರಾಜಾ ಅಮರೇಶ್ವರ ನಾಯಕಗೆ ಗೆಲ್ಲಿಸಿ, ಮೋದಿ ಕೈ ಬಲಪಡಿಸಿ: ವಿ.ಸೋಮಣ್ಣ

| Published : Apr 30 2024, 02:03 AM IST

ರಾಜಾ ಅಮರೇಶ್ವರ ನಾಯಕಗೆ ಗೆಲ್ಲಿಸಿ, ಮೋದಿ ಕೈ ಬಲಪಡಿಸಿ: ವಿ.ಸೋಮಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸೋಮವಾರ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿದರು.

ಸಿರವಾರ: ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ರಾಜಾ ಅಮರೇಶ್ವರ ನಾಯಕರನ್ನು ಗೆಲ್ಲಿಸಬೇಕು ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.

ಮಾನ್ವಿ ವಿಧಾನಸಭಾ ಕ್ಷೇತ್ರದ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸೋಮವಾರ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿಯವರ ಹತ್ತು ವರ್ಷಗಳ ಆಡಳಿತದಲ್ಲಿ ದೇಶವು ಸುಭಿಕ್ಷವಾಗಿದೆ. ರಾಜಾ ಅಮರೇಶ್ವರ ನಾಯಕರು ಮಿತ ಭಾಷಿಕರು, ಸೌಮ್ಯ ಸ್ವಭಾವದವರು. ಅವರು ಅಭಿವೃದ್ಧಿಪರ ಚಿಂತನೆ ಹೊಂದಿದವರು. ನಾನು ರಾಯಚೂರು ಉಸ್ತುವಾರಿ ಸಚಿವರಾಗಿದ್ದಾಗ ಅವರ ಕಾರ್ಯವೈಖರಿ ಕಂಡಿದ್ದೇನೆ. ಹೀಗಾಗಿ ಅವರಿಗೆ ಮೋದಿ ಮತ್ತು ದೇವೇಗೌಡರ ಆಶೀರ್ವಾದವಿದೆ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಕಳೆದ ಐದು ವರ್ಷದಲ್ಲಿ 34 ಸಾವಿರ ಕೋಟಿ ಅನುದಾನ ತರುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಮತ್ತೊಮ್ಮೆ ಅವಕಾಶ ನೀಡುವಂತೆ ಕೋರಿದರು. ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕರು ಮಾತನಾಡಿದರು. ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಇದ್ದರು.